ADVERTISEMENT

ಲೋಕಸಭೆ ಸದಸ್ಯರಾಗಿ ಶತ್ರುಘ್ನ ಸಿನ್ಹಾ ಪ್ರಮಾಣ ವಚನ ಸ್ವೀಕಾರ

ಪಿಟಿಐ
Published 22 ಜುಲೈ 2024, 9:27 IST
Last Updated 22 ಜುಲೈ 2024, 9:27 IST
<div class="paragraphs"><p>ಲೋಕಸಭೆ ಸದಸ್ಯರಾಗಿ ಶತ್ರುಘ್ನ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿದರು.</p></div>

ಲೋಕಸಭೆ ಸದಸ್ಯರಾಗಿ ಶತ್ರುಘ್ನ ಸಿನ್ಹಾ ಪ್ರಮಾಣ ವಚನ ಸ್ವೀಕರಿಸಿದರು.

   

ಪಿಟಿಐ ಚಿತ್ರ 

ನವದೆಹಲಿ: ಲೋಕಸಭೆ ಸದಸ್ಯರಾಗಿ ಇಂದು(ಸೋಮವಾರ) ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) ನಟ ಹಾಗೂ ಸಂಸದ ಶತ್ರುಘ್ನ ಸಿನ್ಹಾ ಅವರು ಪ್ರಮಾಣ ವಚನ ಸ್ವೀಕರಿಸಿದರು.

ADVERTISEMENT

ಪಶ್ಚಿಮ ಬಂಗಾಳದ ಅಸನ್ಸೋಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಿನ್ಹಾ ಗೆಲುವು ಸಾಧಿಸಿದ್ದಾರೆ. ಜೂನ್‌ನಲ್ಲಿ ನಡೆದ ಮೊದಲ ಅಧಿವೇಶನದಲ್ಲಿ ಸಿನ್ಹಾ ಅವರು ಕಾರಣಾಂತರಗಳಿಂದ ಲೋಕಸಭೇ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಇಂದು ಸಂಸತ್ತಿನಲ್ಲಿ ದೇವರ ಹೆಸರಿನಲ್ಲಿ ಲೋಕಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಸಭೆಯು 543 ಸದಸ್ಯರ ಬಲ ಹೊಂದಿದ್ದು, 542 ಸದಸ್ಯರು ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್‌ಬರೇಲಿ ಹಾಗೂ ಕೇರಳದ ವಯನಾಡು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ ರಾಯ್‌ಬರೇಲಿ ಮೂಲಕ ಸಂಸತ್‌ನ್ನು ಪ್ರತಿನಿಧಿಸುವುದಾಗಿ ಹೇಳಿದ್ದ ರಾಹುಲ್‌, ವಯನಾಡು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.