ADVERTISEMENT

ಶೀನಾ ಬೋರಾ ಕೊಲೆ ಪ್ರಕರಣ: ಸಿಬಿಐ, ಮಹಾರಾಷ್ಟ್ರ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್‌

ಪಿಟಿಐ
Published 18 ಫೆಬ್ರುವರಿ 2022, 10:36 IST
Last Updated 18 ಫೆಬ್ರುವರಿ 2022, 10:36 IST
ಸುಪ್ರೀಂಕೋರ್ಟ್‌– ಪ್ರಾತಿನಿಧಿಕ ಚಿತ್ರ
ಸುಪ್ರೀಂಕೋರ್ಟ್‌– ಪ್ರಾತಿನಿಧಿಕ ಚಿತ್ರ   

ನವದೆಹಲಿ: ಶೀನಾ ಬೋರಾ ಕೊಲೆ ಪ್ರಕರಣದ ಪ್ರಮುಖ ಆರೋಪಿ, ಆಕೆಯ ತಾಯಿ ಇಂದ್ರಾಣಿ ಮುಖರ್ಜಿ ಸಲ್ಲಿಸಿರುವ ಜಾಮೀನು ಅರ್ಜಿ ಸಂಬಂಧ ತಕ್ಷಣ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂಕೋರ್ಟ್‌ ಶುಕ್ರವಾರ ಸಿಬಿಐ ಮತ್ತು ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ.

ಬಾಂಬೆ ಹೈಕೋರ್ಟ್‌ ಜಾಮೀನು ನೀಡಲು ನಿರಾಕರಿಸಿ 2021ರ ನವೆಂಬರ್‌ 16ರಂದು ಹೊರಡಿಸಿರುವ ಆದೇಶ ಪ್ರಶ್ನಿಸಿಇಂದ್ರಾಣಿ ಮುಖರ್ಜಿ ಸಲ್ಲಿಸಿರುವ ಮನವಿಯನ್ನು ನ್ಯಾಯಮೂರ್ತಿಗಳಾದ ಎಲ್‌. ನಾಗೇಶ್ವರ ರಾವ್‌ ಮತ್ತು ಪಿ.ಎಸ್‌. ನರಸಿಂಹ ಅವರನ್ನೊಳಗೊಂಡ ಪೀಠವು ಆಲಿಸಿತು.

ಎರಡು ವಾರಗಳೊಳಗೆ ಪ್ರತಿಕ್ರಿಯೆ ಸಲ್ಲಿಸುವಂತೆ ಪೀಠವು ನೋಟಿಸ್‌ ಜಾರಿ ಮಾಡಿದೆ. ಇಂದ್ರಾಣಿ ಪರ ಹಿರಿಯ ವಕೀಲ ಮುಕುಲ್‌ ರೋಹಟಗಿ ಹಾಜರಾಗಿದ್ದರು.

ADVERTISEMENT

ಈ ಕೊಲೆ ಪ್ರಕರಣ ಸಂಬಂಧಇಂದ್ರಾಣಿಯವರನ್ನು 2015ರ ಆಗಸ್ಟ್‌ನಲ್ಲಿ ಬಂಧಿಸಲಾಗಿದ್ದು, ಸದ್ಯ ಮುಂಬೈನ ಬೈಕುಲ್ಲಾ ಮಹಿಳಾ ಬಂದಿಖಾನೆಯಲ್ಲಿ ಇರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.