ADVERTISEMENT

ಬಂಡಾಯ ಶಾಸಕರ ಅನರ್ಹತೆಗೆ ಕ್ರಮ: ಶಿವಸೇನಾ ನಾಯಕ ಸಂಜಯ್ ರಾವುತ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಜೂನ್ 2022, 5:32 IST
Last Updated 24 ಜೂನ್ 2022, 5:32 IST
ಸಂಜಯ್ ರಾವುತ್
ಸಂಜಯ್ ರಾವುತ್   

ಮುಂಬೈ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರಿದಿದ್ದು, ಬಂಡಾಯ ಶಾಸಕರ ಅನರ್ಹತೆಗೆ ಕ್ರಮ ಕೈಗೊಳ್ಳಲಿದ್ದೇವೆ ಎಂದು ಶಿವಸೇನಾ ನಾಯಕ ಸಂಜತ್ ರಾವುತ್ ಹೇಳಿದ್ದಾರೆ.

‘12 ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಅವರು ಹೇಳುವ ಸಂಖ್ಯೆಗಳು ಕೇವಲ ಲೆಕ್ಕಾಚಾರವಷ್ಟೆ. ಶಿವಸೇನಾ ದೊಡ್ಡ ಸಮುದ್ರ ಇದ್ದಂತೆ. ಇಂಥ ಅಲೆಗಳು ಬರುತ್ತವೆ, ಹೋಗುತ್ತವೆ’ ಎಂದು ಅವರು ಹೇಳಿದ್ದಾರೆ.

ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ (ಎಂವಿಎ)’ ಸರ್ಕಾರ ಉಳಿಸಲು ಪ್ರಯತ್ನಿಸಿದರೆ ಎನ್‌ಸಿಪಿ ವರಿಷ್ಠ ಶರದ್ ಪವಾರ್ ಅವರನ್ನು ಮನೆಗೆ ಹೋಗಲು ಬಿಡುವುದಿಲ್ಲ ಎಂದು ಕೇಂದ್ರ ಸಚಿವರೊಬ್ಬರು ಬೆದರಿಕೆಯೊಡ್ಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಇಂಥ ಹೇಳಿಕೆಯನ್ನು ಬೆಂಬಲಿಸುತ್ತಾರೆಯೇ ಎಂದು ರಾವುತ್ ಪ್ರಶ್ನಿಸಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.