ಮುಂಬೈ: ಛತ್ರಪತಿ ಶಿವಾಜಿ ಪ್ರತಿಮೆ ಕುಸಿತ ಘಟನೆ ವಿರೋಧಿಸಿ ‘ಮಹಾ ವಿಕಾಸ್ ಅಘಾಡಿ’(ಎಂವಿಎ) ಮುಖಂಡರು ಭಾನುವಾರ ದಕ್ಷಿಣ ಮುಂಬೈನ ಹುತಾತ್ಮ ಚೌಕ್‌ನಿಂದ ಗೇಟ್‌ವೇ ಆಫ್ ಇಂಡಿಯಾದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್, ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ, ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ನಾನಾ ಪಟೋಲೆ ಅವರು ಹುತಾತ್ಮ ಚೌಕ್‌ಗೆ ಪುಷ್ಪಾರ್ಚನೆ ಮಾಡುವ ಮೂಲಕ ಪ್ರತಿಭಟನಾ ಮೆರವಣಿಗೆಯನ್ನು ಪ್ರಾರಂಭಿಸಿದರು.
ಈ ವೇಳೆ ಘೋಷಣಾ ಫಲಕಗಳನ್ನು ಪ್ರದರ್ಶಿಸಿದ ಕಾರ್ಯಕರ್ತರು, ಏಕನಾಥ ಶಿಂದೆ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
‘ಪ್ರತಿಮೆ ಅನಾವರಣಗೊಳಿಸಿ ಎಂಟು ತಿಂಗಳಲ್ಲೇ ಕುಸಿದು ಬಿದ್ದಿದೆ. ಮಹಾರಾಷ್ಟ್ರ ಜನರ ಆಕ್ರೋಶಕ್ಕೆ ಧ್ವನಿ ನೀಡಲು ಈ ಪ್ರತಿಭಟನಾ ಮೆರವಣಿಗೆಯನ್ನು ನಡೆಸುತ್ತಿದ್ದೆವೆ’ ಎಂದು ಎನ್‌ಸಿಪಿ (ಎಸ್‌ಪಿ) ನಾಯಕ ರಾಜೇಶ್ ಟೋಪೆ ತಿಳಿಸಿದರು.
ಕಾಂಗ್ರೆಸ್ ಸಂಸದ ಶಾಹು ಛತ್ರಪತಿ, ಬಾರಾಮತಿ ಸಂಸದೆ ಸುಪ್ರಿಯಾ ಸುಳೆ ಮತ್ತು ಶಾಸಕ ಅನಿಲ್ ದೇಶಮುಖ್ ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.