ದ್ವಾರಕಾ: ಇಲ್ಲಿನ ಮನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅನಾಹುತದಲ್ಲಿ ಒಂದೇ ಕುಟುಂಬದ ನಾಲ್ವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ
ಭಾನುವಾರ ಬೆಳಿಗ್ಗೆ 3.30ರ ಸುಮಾರಿಗೆ ಈ ದುರಂತ ಸಂಭವಿಸಿದೆ.
ಆದಿತ್ಯ ರಸ್ತೆಯಲ್ಲಿರುವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಗೆ ಮನೆಯ ವೈರ್ಗಳು ತುಂಡಾಗಿದ್ದರಿಂದ ವಿದ್ಯುತ್ ಪೂರೈಕೆ ಸ್ಥಗಿತವಾಗಿದೆ. ಈ ವೇಳೆ ಮನೆಯಿಂದ ಹೊರ ಬರಲು ಸಾಧ್ಯವಾಗಿಲ್ಲವಾದ್ದರಿಂದ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 8 ತಿಂಗಳ ಮಗು ಕೂಡ ಮೃತಪಟ್ಟಿದೆ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.