ಬಾಗಪತ್ (ಉ.ಪ್ರದೇಶ): ರಾಷ್ಟ್ರೀಯ ಲೋಕ ದಳದ (ಆರ್‌ಎಲ್‌ಡಿ) ಮುಖ್ಯಸ್ಥ ಜಯಂತ್ ಸಿಂಗ್ ಅವರು ಆಡಳಿತ ಪಕ್ಷ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವನ್ನು (ಎನ್‌ಡಿಎ) ಸೇರುವ ಒಲವು ತೋರಿದ್ದಾರೆ ಎಂಬ ವರದಿ ಕುರಿತು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ಅಧ್ಯಕ್ಷ ನರೇಶ್ ಟಿಕಾಯತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಟಿಕಾಯತ್, ‘ರಾಜಕೀಯದಲ್ಲಿ ಶತ್ರು ಯಾವಾಗ ಮಿತ್ರನಾಗುತ್ತಾನೆ ಎಂದು ಊಹಿಸಲು ಸಾಧ್ಯವಿಲ್ಲ. ಜಯಂತ್ ಸಿಂಗ್ ತಮ್ಮದೇ ಆದ ಆಲೋಚನೆಗಳನ್ನು ಹೊಂದಿದ್ದಾರೆ. ಆದರೆ, ಇಂತಹ ನಿರ್ಧಾರ ತೆಗೆದುಕೊಳ್ಳುವ ಮುನ್ನ ಅವರೊಟ್ಟಿಗೆ ಮೂರು ತಲೆಮಾರಿನಿಂದ ಇದ್ದ ಜನರನ್ನು ಸಂಪರ್ಕಿಸಬೇಕಿತ್ತು’ ಎಂದು ಹೇಳಿದ್ದಾರೆ.
ತಮ್ಮ ತಾತ, ಮಾಜಿ ಪ್ರಧಾನಮಂತ್ರಿ ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ಘೋಷಿಸಿದ್ದಕ್ಕಾಗಿ ಕೇಂದ್ರ ಸರ್ಕಾರವನ್ನು ಜಯಂತ್ ಸಿಂಗ್ ಶ್ಲಾಘಿಸಿದ್ದರು. ಈ ಬೆನ್ನಲ್ಲೇ ಸಿಂಗ್ ಎನ್‌ಡಿಎ ಸೇರುತ್ತಾರೆ ಎಂಬ ಊಹಾಪೋಹಗಳು ತೀವ್ರಗೊಂಡಿವೆ.
ಚರಣ್ ಸಿಂಗ್ ಅವರು ರೈತರ ನಾಯಕರಾಗಿದ್ದರು. ಭಾರತ ರತ್ನ ಪ್ರಶಸ್ತಿಗೆ ಅವರು ಅರ್ಹರಾಗಿದ್ದರು. ಈ ಗೌರವವನ್ನು ಅವರು ಮೊದಲೇ ಸ್ವೀಕರಿಸಬೇಕಿತ್ತು. ಚೌಧರಿ ಚರಣ್ ಸಿಂಗ್ ಅವರಿಗೆ ಭಾರತ ರತ್ನ ನೀಡುವಂತೆ ರೈತರು ಒತ್ತಾಯಿಸಿದ್ದರು ಎಂದು ನರೇಶ್ ಟಿಕಾಯತ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.