ADVERTISEMENT

ಬಪ್ಪಿ ಲಹಿರಿ ನಿಧನಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಸೇರಿ ಗಣ್ಯರಿಂದ ಸಂತಾಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 16 ಫೆಬ್ರುವರಿ 2022, 4:14 IST
Last Updated 16 ಫೆಬ್ರುವರಿ 2022, 4:14 IST
ಬಪ್ಪಿ ಲಹಿರಿ – ಪ್ರಜಾವಾಣಿ ಸಂಗ್ರಹ ಚಿತ್ರ
ಬಪ್ಪಿ ಲಹಿರಿ – ಪ್ರಜಾವಾಣಿ ಸಂಗ್ರಹ ಚಿತ್ರ   

ನವದೆಹಲಿ: ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹಿರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

‘ಬಪ್ಪಿ ಲಹಿರಿ ಅವರ ಸಂಗೀತವು ಎಲ್ಲವನ್ನೂ ಒಳಗೊಳ್ಳುತ್ತಿದ್ದುದಲ್ಲದೆ, ವೈವಿಧ್ಯಮಯ ಭಾವನೆಗಳನ್ನು ಸುಂದರವಾಗಿ ಪ್ರಕಟಗೊಳಿಸುತ್ತಿತ್ತು. ಅವರ ಸಂಗೀತ ನಿರ್ದೇಶನ, ಗಾಯನವು ತಲೆಮಾರುಗಳನ್ನು ಸೆಳೆದಿತ್ತು. ಅವರ ಲವಲವಿಕೆಯನ್ನು ಎಲ್ಲರೂ ಮಿಸ್ ಮಾಡಿಕೊಳ್ಳಲಿದ್ದಾರೆ. ಅವರ ನಿಧನದಿಂದ ದುಃಖವಾಗಿದೆ. ಸಂತಾಪಗಳು, ಓಂ ಶಾಂತಿ’ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

‘ಖ್ಯಾತ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹಿರಿ ನಿಧನದಿಂದ ಬಹಳ ನೋವಾಗಿದೆ. ಅವರ ನಿಧನದಿಂದ ಭಾರತದ ಸಂಗೀತ ಕ್ಷೇತ್ರದಲ್ಲಿ ದೊಡ್ಡ ನಿರ್ವಾತ ಸೃಷ್ಟಿಯಾಗಿದೆ. ‘ಬಪ್ಪಿ ದಾ’ ಅವರು ತಮ್ಮ ಗಾಯನ ಹಾಗೂ ಉತ್ಸಾಹಭರಿತ ಸ್ವಭಾವದಿಂದಾಗಿ ಸದಾ ನೆನಪಿನಲ್ಲುಳಿಯುತ್ತಾರೆ’ ಎಂದು ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.