ಕೋಲ್ಕತ್ತ: ಕನ್ನಡ, ಹಿಂದಿ ಸಹಿತ ವಿವಿಧ ಭಾಷೆಗಳಲ್ಲಿ ನೂರಾರು ಹಾಡುಗಳನ್ನು ಹಾಡಿರುವ ಖ್ಯಾತಗಾಯಕ ಕೃಷ್ಣಕುಮಾರ್ ಕುನ್ನತ್ (53) ಅವರು ಮಂಗಳವಾರ ರಾತ್ರಿ ಇಲ್ಲಿ ಅನಾರೋಗ್ಯದಿಂದ ನಿಧನರಾದರು. ಅವರು ‘ಕೆಕೆ’ ಎಂದೇ ಖ್ಯಾತರಾಗಿದ್ದರು.
‘ಕೋಲ್ಕತ್ತದಲ್ಲಿ ಆಯೋಜಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಕೆಕೆ ಅವರು ಸುಮಾರು ಒಂದು ಗಂಟೆ ಕಾಲ ಹಾಡಿದ್ದರು. ಆದರೆ, ಹೋಟೆಲ್ ತಲುಪಿದ ಬಳಿಕ ಅವರ ಆರೋಗ್ಯದಲ್ಲಿ ಏರುಪೇರಾಗಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ಆಸ್ಪತ್ರೆಗೆ ತಲುಪುವ ಮೊದಲೇ ಮೃತಪಟ್ಟಿದ್ದರು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕೃಷ್ಣಕುಮಾರ್ ಕುನ್ನತ್ ಅವರು ತಮಿಳು, ತೆಲುಗು, ಮಲಯಾಳ, ಮರಾಠಿ, ಬೆಂಗಾಲಿ ಭಾಷೆಗಳಲ್ಲೂ ಹಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.