ADVERTISEMENT

ಕೇಜ್ರಿವಾಲ್ ಭೇಟಿ ಮಾಡಲಿರುವ ಸಿಸೋಡಿಯಾ: ಮುಂದಿನ ಸಿಎಂ ಬಗ್ಗೆ ಚರ್ಚೆ ಸಾಧ್ಯತೆ

ಪಿಟಿಐ
Published 16 ಸೆಪ್ಟೆಂಬರ್ 2024, 6:48 IST
Last Updated 16 ಸೆಪ್ಟೆಂಬರ್ 2024, 6:48 IST
   

ನವದೆಹಲಿ: ಎಎಪಿ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಇಂದು (ಸೋಮವಾರ) ಭೇಟಿ ಮಾಡಲಿದ್ದಾರೆ.

ಜನರು ಪ್ರಾಮಾಣಿಕತೆಯ ಪ್ರಮಾಣಪತ್ರ ನೀಡುವವರೆಗೂ ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತುಕೊಳ್ಳುವುದಿಲ್ಲ. ಸಿಎಂ ಸ್ಥಾನಕ್ಕೆ ಎರಡು ದಿನಗಳ ನಂತರ ರಾಜೀನಾಮೆ ನೀಡುವುದಾಗಿ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದರು.

ಘೋಷಣೆ ಬೆನ್ನಲೆ ಸಿಸೋಡಿಯಾ ಅವರು ಇಂದು ಕೇಜ್ರಿವಾಲ್ ಅವರನ್ನು ಭೇಟಿ ಮಾಡುತ್ತಿದ್ದಾರೆ. ಸಿವಿಲ್ ಲೈನ್ಸ್‌ನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಮುಂದಿನ ಮುಖ್ಯಮಂತ್ರಿಯ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧಿತರಾಗಿದ್ದ ಕೇಜ್ರಿವಾಲ್ ಅವರು ಜಾಮೀನು ಪಡೆದು ಶುಕ್ರವಾರ ಜೈಲಿನಿಂದ ಬಿಡುಗಡೆ ಆಗಿದ್ದಾರೆ. ಎಎಪಿ ಶಾಸಕರ ಸಭೆಯನ್ನು ಇನ್ನು ಎರಡು ದಿನಗಳಲ್ಲಿ ನಡೆಸಲಾಗುತ್ತದೆ. ಪಕ್ಷದ ನಾಯಕರೊಬ್ಬರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಾರೆ ಎಂದು ಕೇಜ್ರಿವಾಲ್ ಪ್ರಕಟಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.