ADVERTISEMENT

ಅಬಕಾರಿ ನೀತಿ ಜಾರಿ ಪ್ರಕರಣ: ಸಿಸೋಡಿಯಾ ನ್ಯಾಯಾಂಗ ಬಂಧನದ ಅವಧಿ ಮೇ 23ರ ವರೆಗೆ ವಿಸ್ತರಣೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಮೇ 2023, 10:49 IST
Last Updated 8 ಮೇ 2023, 10:49 IST
ಮನೀಶ್‌ ಸಿಸೋಡಿಯಾ
ಮನೀಶ್‌ ಸಿಸೋಡಿಯಾ   

ನವದೆಹಲಿ: 2021-22ರ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯವು ಮೇ 23 ರವರೆಗೆ ವಿಸ್ತರಿಸಿದೆ.

ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸೋಡಿಯಾ ಅವರನ್ನು ಸಿಬಿಐ ಫೆಬ್ರುವರಿ 26 ರಂದು ಬಂಧಿಸಿತ್ತು.

ಇದೇ ಪ್ರಕರಣದ ಹಣ ಅಕ್ರಮ ವರ್ಗಾವಣೆ ಆರೋಪದ ಮೇಲೆ ಜಾರಿ ನಿರ್ದೇಶನಾಲವೂ ತನಿಖೆ ನಡೆಸುತ್ತಿದೆ. ಹೀಗಾಗಿ, ಮಾರ್ಚ್ 9 ರಂದು ತಿಹಾರ್ ಜೈಲಿನಿಂದ ಸಿಸೋಡಿಯಾ ಅವರನ್ನು ಇ.ಡಿ ವಶಕ್ಕೆ ಪಡೆದಿದೆ.

ADVERTISEMENT

ಅಬಕಾರಿ ನೀತಿ ಜಾರಿ ಪ್ರಕರಣದಲ್ಲಿ ಸಿಸೋಡಿಯಾ ಅವರನ್ನು ‘ಪ್ರಮುಖ ಸಂಚುಕೋರ’ ಎಂದು ಇ.ಡಿ ಆರೋಪಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.