ನವದೆಹಲಿ: ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರಿಗೆ ಅನಾರೋಗ್ಯಪೀಡಿತ ತಮ್ಮ ಪತ್ನಿಯೊಂದಿಗೆ ದಿನ ಬಿಟ್ಟು ದಿನ, ಮಧ್ಯಾಹ್ನ 3ರಿಂದ 4ರವರೆಗೆ ವಿಡಿಯೊ ಮೂಲಕ ಮಾತನಾಡಲು ದೆಹಲಿ ಹೈಕೋರ್ಟ್ ಗುರುವಾರ ಅವಕಾಶ ನೀಡಿದೆ.
ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಸಿಸೋಡಿಯಾ ಅವರು ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿ ಇದ್ದಾರೆ.
ಸಿಸೋಡಿಯಾ ಅವರ ಜಾಮೀನು ಹಾಗೂ ಮಧ್ಯಂತರ ಜಾಮೀನು ಅರ್ಜಿಗಳ ಕುರಿತು ನ್ಯಾಯಾಲಯವು ಮುಂದಿನ ನಿರ್ಧಾರ ತೆಗೆದುಕೊಳ್ಳುವ ವರೆಗೂ ಈ ಆದೇಶ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿದೆ. ‘ಜಾಮೀನು ಅರ್ಜಿಗಳ ಸಂಬಂಧ ಆದಷ್ಟು ಬೇಗ ನ್ಯಾಯಾಲಯವು ನಿರ್ಧಾರ ಕೈಗೊಳ್ಳಲಿದೆ’ ಎಂದು ನ್ಯಾಯಮೂರ್ತಿ ದಿನೇಶ್ ಕುಮಾರ್ ಶರ್ಮಾ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.