ಲಖನೌ(ಉತ್ತರ ಪ್ರದೇಶ್): ಹಾಥರಸ್ ಕಾಲ್ತುಳಿತ ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ(ಎಸ್‌ಐಟಿ), ಉತ್ತರ ಪ್ರದೇಶ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಎಸ್‌ಐಟಿ ತನ್ನ ವರದಿಯನ್ನು ಸರಕಾರಕ್ಕೆ ಸಲ್ಲಿಸಿದೆ’ ಎಂದು ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಶಿಶಿರ್ ತಿಳಿಸಿದ್ದಾರೆ. ಆದರೆ, ವರದಿಯ ಅಂಶಗಳನ್ನು ಅವರು ಬಹಿರಂಗಪಡಿಸಿಲ್ಲ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ 90ಕ್ಕೂ ಹೆಚ್ಚು ಹೇಳಿಕೆಗಳನ್ನು ದಾಖಲಿಸಿಕೊಂಡಿತ್ತು. ಎಸ್‌ಐಟಿ ತನಿಖೆ ನೇತೃತ್ವವನ್ನು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಆಗ್ರಾ ವಲಯ) ಅನುಪಮ್ ಕುಲಶ್ರೇಷ್ಠ ಅವರು ವಹಿಸಿಕೊಂಡಿದ್ದರು.
ಏತನ್ಮಧ್ಯೆ, ಅಲಹಾಬಾದ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ಶ್ರೀವಾಸ್ತವ ಮತ್ತು ನಿವೃತ್ತ ಐಪಿಎಸ್ ಹೇಮಂತ್ ರಾವ್ ನೇತೃತ್ವದ ನ್ಯಾಯಾಂಗ ಆಯೋಗವೂ ಕಾಲ್ತುಳಿತ ಪ್ರಕರಣದ ತನಿಖೆ ನಡೆಸುತ್ತಿದೆ.
ಜುಲೈ 2ರಂದು ಹಾಥರಸ್‌ನ ಫೂಲರಾಯ್ ಗ್ರಾಮದಲ್ಲಿ ನಡೆದ ಸತ್ಸಂಗದ ವೇಳೆ ಕಾಲ್ತುಳಿತ ಸಂಭವಿಸಿತ್ತು. ಘಟನೆಯಲ್ಲಿ 121 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.