ADVERTISEMENT

ಪಶ್ಚಿಮ ಘಟ್ಟದಲ್ಲಿ ಪರಿಸ್ಥಿತಿ ಹದಗೆಡುತ್ತಿದೆ: ಪರಿಸರವಾದಿ ಮಾಧವ ಗಾಡ್ಗೀಲ್

ಪರಿಸರವಾದಿ ಮಾಧವ ಗಾಡ್ಗೀಲ್ ಅಭಿಪ್ರಾಯ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2021, 19:30 IST
Last Updated 19 ಅಕ್ಟೋಬರ್ 2021, 19:30 IST
ಮಾಧವ ಗಾಡ್ಗೀಲ್
ಮಾಧವ ಗಾಡ್ಗೀಲ್   

ತಿರುವನಂತಪುರ (ಪಿಟಿಐ): ಪಶ್ಚಿಮ ಘಟ್ಟಗಳಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ಖ್ಯಾತ ಪರಿಸರವಾದಿ ಮಾಧವ ಗಾಡ್ಗೀಲ್ ಹೇಳಿದ್ದಾರೆ. ವಿಪತ್ತುಗಳನ್ನು ಕೊನೆಗೊಳಿಸಲು ಸಾಕಷ್ಟು ಕ್ರಮಗಳನ್ನು ತೆಗೆದುಕೊಳ್ಳುವಂತೆ ಜನಪ್ರತಿನಿಧಿಗಳ ಮೇಲೆ ಒತ್ತಡ ಹೇರುವಂತೆ ಅವರು ಜನರನ್ನು ಒತ್ತಾಯಿಸಿದ್ದಾರೆ.

ಕೇರಳದಲ್ಲಿ ಭಾರಿ ಭೂಕುಸಿತ ಹಾಗೂ ಪ್ರಾಣಹಾನಿ ಸಂಭವಿಸಿದ್ದು, ಗಾಡ್ಗೀಲ್‌ ಮತ್ತು ಅವರ ನೇತೃತ್ವದ ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿಯು ಸಿದ್ಧಪಡಿಸಿದ ವರದಿ ಮತ್ತೆ ಚರ್ಚೆಗೆ ಬಂದಿದೆ.2011ರಲ್ಲಿ ಕೇಂದ್ರ ಪರಿಸರ ಸಚಿವಾಲಯಕ್ಕೆ ಸಲ್ಲಿಸಿದ ಗಾಡ್ಗೀಲ್ ವರದಿಯು ಪರಿಸರ ಸೂಕ್ಷ್ಮ ಘಟ್ಟಗಳನ್ನು ಸಂರಕ್ಷಿಸುವ ಕ್ರಮಗಳನ್ನು ಶಿಫಾರಸು ಮಾಡಿತ್ತು.

ಪಶ್ಚಿಮ ಘಟ್ಟಗಳಲ್ಲಿ ಸಂಭವಿಸುತ್ತಿರುವ ಅನಾಹುತಗಳಿಗೆ ಕಲ್ಲು ಗಣಿಗಾರಿಕೆಯಂತಹ ಪರಿಸರ ಹಾನಿಕಾರಕ ಚಟುವಟಿಕೆಗಳನ್ನು ಗಾಡ್ಗೀಲ್ ಅವರು ದೂಷಿಸಿದ್ದಾರೆ. ವರದಿಯನ್ನು ಜಾರಿಗೆ ತರುವ ಸಮಯ ಮುಗಿದಿದೆ ಎಂಬ ಮಾತನ್ನು ಅವರು ತಳ್ಳಿಹಾಕಿದ್ದಾರೆ.

ADVERTISEMENT

‘ವರದಿಯನ್ನು ಜನರ ಸಂಪೂರ್ಣ ಭಾಗವಹಿಸುವಿಕೆಯೊಂದಿಗೆ ಜಾರಿಗೊಳಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.