ADVERTISEMENT

ಒಡಿಶಾ | ಮೂರು ಪ್ರತ್ಯೇಕ ಅಪಘಾತಗಳಲ್ಲಿ ಆರು ಮಂದಿ ಸಾವು, 11 ಮಂದಿಗೆ ಗಾಯ

ಪಿಟಿಐ
Published 15 ಸೆಪ್ಟೆಂಬರ್ 2024, 10:16 IST
Last Updated 15 ಸೆಪ್ಟೆಂಬರ್ 2024, 10:16 IST
<div class="paragraphs"><p>ಅಪಘಾತ</p></div>

ಅಪಘಾತ

   

(ಸಾಂದರ್ಭಿಕ ಚಿತ್ರ)

ಭುವನೇಶ್ವರ: ಒಡಿಶಾದಲ್ಲಿ ಮೂರು ಪ್ರತ್ಯೇಕ ಅಪಘಾತಗಳು ಸಂಭವಿಸಿದ್ದು, ಆರು ಮಂದಿ ಮೃತಪಟ್ಟಿದ್ದಾರೆ. 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಬೋಲಂಗಿರ್ ಜಿಲ್ಲೆಯ ಮದಿಯಾಪಾಲಿ ಬಳಿ ರಾಷ್ಟ್ರೀಯ ಹೆದ್ದಾರಿ 26ರಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರ ಗುರುತು ಪತ್ತೆಯಾಗಿಲ್ಲ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ತಡರಾತ್ರಿ ಮಯೂರ್‌ಭಂಜ್ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಬರಿಪಾದ ಪಟ್ಟಣದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-18ರ ಪಲ್ಬಾನಿ ಬಳಿ ಟ್ರಕ್‌ಗೆ ಬೈಕ್‌ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ಬಿಕಾಶ್ ಮೊಹಂತ (25) ಮತ್ತು ಮಿತು ಮೊಹಂತ (26) ಎಂದು ಗುರುತಿಸಲಾಗಿದೆ.

ಮತ್ತೊಂದು ಅಪಘಾತದಲ್ಲಿ ಅತಿ ವೇಗವಾಗಿ ಬಂದ ಕಾರೊಂದು ಬರಿಪಾದ-ಲುಲುಂಗ್ ರಸ್ತೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಾಲಕ ಭುವನ್ ಸಿಂಗ್ (40), ಮತ್ತು ಓರ್ವ ಪ್ರಯಾಣಿಕ ಜಯಂತ ಸಿಂಗ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದು, ಇತರೆ 11 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲಾ ಪೊಲೀಸರು ಎರಡು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.