ADVERTISEMENT

ಬ್ರಿಟನ್‌ಗೆ ಅಣ್ಣಾಮಲೈ: ತಮಿಳುನಾಡು BJPಯಲ್ಲಿ 6 ಸದಸ್ಯರ ಸಮನ್ವಯ ಸಮಿತಿ ರಚನೆ

ಪಿಟಿಐ
Published 30 ಆಗಸ್ಟ್ 2024, 10:02 IST
Last Updated 30 ಆಗಸ್ಟ್ 2024, 10:02 IST
BJP
BJP   

ಚೆನ್ನೈ: ಶೈಕ್ಷಣಿಕ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಬ್ರಿಟನ್‌ಗೆ ತೆರಳಿರುವುದರಿಂದ, ಪಕ್ಷಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಿರ್ಧಾರಗಳನ್ನು ಕೈಗೊಳ್ಳಲು ಆರು ಮಂದಿಯನ್ನು ಒಳಗೊಂಡ ಸಮನ್ವಯ ಸಮಿತಿಯನ್ನು ರಚಿಸಲಾಗಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್‌ ಸಿಂಗ್‌ ಅವರ ನಿರ್ದೇಶನದ ಮೇರೆಗೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಮಿಳುನಾಡು ಬಿಜೆಪಿ ಘಟಕದ ಪ್ರಕಟಣೆ ತಿಳಿಸಿದೆ.

ಹಿರಿಯ ಬಿಜೆಪಿ ನಾಯಕ ಮತ್ತು ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್‌. ರಾಜಾ ಅವರು ಸಮಿತಿಯ ಸಂಚಾಲಕರಾಗಿದ್ದಾರೆ. ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಎಂ. ಚಕ್ರವರ್ತಿ ಮತ್ತು ಪ್ರೊ. ಕೆ. ಕನಗಸಬಾಪತಿ, ಎಂ. ಮುರುಗನಂದನ್‌, ಪ್ರೊ. ರಾಮ ಶ್ರೀನಿವಾಸನ್‌ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಖಜಾಂಚಿ ಎಸ್‌. ಆರ್‌ ಶೇಖರ್‌ ಅವರು ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ಪಕ್ಷದ ಕಾರ್ಯಗಳಿಗೆ ಸಂಬಂಧಿಸಿದಂತೆ ಸಮನ್ವಯ ಸಮಿತಿಯು ರಾಜ್ಯ ಕೋರ್‌ ಸಮಿತಿಯೊಂದಿಗೆ ಚರ್ಚಿಸಲಿದೆ ಮತ್ತು ನಿರ್ಧಾರಗಳನ್ನು ಕೈಗೊಳ್ಳುತ್ತದೆ. ಸಮನ್ವಯ ಸಮಿತಿಯ ಸಂಚಾಲಕರು ನಿರ್ದೇಶಿಸಿದಂತೆ ಪ್ರತಿಯೊಬ್ಬ ಸದಸ್ಯರು ಒಂದು ಅಥವಾ ಎರಡು ವಲಯಗಳ ಕೆಲಸಗಳನ್ನು ನೋಡಿಕೊಳ್ಳುತ್ತಾರೆ ಎಂದು ಸಿಂಗ್‌ ಹೇಳಿದ್ದಾರೆ.

ಮೂರು ತಿಂಗಳ ಶೈಕ್ಷಣಿಕ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೆ. ಅಣ್ಣಾಮಲೈ ಬ್ರಿಟನ್‌ಗೆ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.