ADVERTISEMENT

Vande Bharat: 6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

ಪಿಟಿಐ
Published 15 ಸೆಪ್ಟೆಂಬರ್ 2024, 6:17 IST
Last Updated 15 ಸೆಪ್ಟೆಂಬರ್ 2024, 6:17 IST
<div class="paragraphs"><p> 6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ</p></div>

6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

   

ರಾಂಚಿ: ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸಂಚರಿಸುವ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ರಾಂಚಿಯಲ್ಲಿ ವರ್ಚುವಲ್‌ ಮೂಲಕ ಭಾನುವಾರ ಚಾಲನೆ ನೀಡಿದರು.

ಇದಕ್ಕೂ ಮೊದಲು, ಜಾರ್ಖಂಡ್‌ನ ಟಾಟಾನಗರದಿಂದ ರೈಲುಗಳಿಗೆ ಚಾಲನೆ ನೀಡಲು ಪ್ರಧಾನಿಯವರು ನಿರ್ಧರಿಸಿದ್ದು, ಪ್ರತಿಕೂಲ ಹವಾಮಾನದ ಕಾರಣದಿಂದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ADVERTISEMENT

ಹೊಸ ರೈಲುಗಳು ಟಾಟಾನಗರ-ಪಟ್ನಾ, ಬ್ರಹ್ಮಪುರ-ಟಾಟಾನಗರ, ರೂರ್ಕೆಲಾ-ಹೌರಾ, ದಿಯೋಘರ್-ವಾರಣಾಸಿ, ಭಾಗಲ್ಪುರ-ಹೌರಾ ಮತ್ತು ಗಯಾ-ಹೌರಾ ಮಾರ್ಗಗಳಲ್ಲಿ ಸಂಚರಿಸಲಿವೆ.

ಮೊದಲ ವಂದೇ ಭಾರತ್ ರೈಲನ್ನು 2019ರ ಫೆಬ್ರವರಿ 15ರಂದು ಉದ್ಘಾಟಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.