ADVERTISEMENT

ಅರುಣಾಚಲ | ಶಸ್ತ್ರಾಸ್ತ್ರಗಳ ಸಹಿತ ಆರು ಮಂದಿ ಉಗ್ರರ ಬಂಧನ

ಪಿಟಿಐ
Published 13 ಜನವರಿ 2024, 13:02 IST
Last Updated 13 ಜನವರಿ 2024, 13:02 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಇಟಾನಗರ: ಅರುಣಾಚಲಪ್ರದೇಶದ ಲೊಂಗ್‌ಡಿಂಗ್ ಜಿಲ್ಲೆಯಲ್ಲಿ ಎನ್‌ಎಸ್‌ಸಿಎನ್–ಐಎಂ ಸಂಘಟನೆಯ ಆರು ಬಂಡುಕೋರರನ್ನು ಬಂಧಿಸಿರುವ ಭದ್ರತಾಪಡೆಗಳು ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳು ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಲೊಂಗ್‌ಡಿಂಗ್ ವ್ಯಾಪ್ತಿಯಲ್ಲಿ ಗುರುವಾರ ಅರೆಸೇನಾ ಪಡೆಗಳು ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಬಂಡುಕೋರರನ್ನು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶನಿವಾರ ಮಾಹಿತಿ ನೀಡಿದ್ದಾರೆ. 

ADVERTISEMENT

ಬಂಧಿತರು ನೀಡಿದ ಮಾಹಿತಿ ಮೇರೆಗೆ ನೊಕ್ನು ಮತ್ತು ಖಾಸಾ ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಸಿ, ಅವರು ಅಡಗಿಸಿಟ್ಟಿದ್ದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ಮೊಬೈಲ್‌ಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.