ADVERTISEMENT

ಹರಿಯಾಣ ಫಲಿತಾಂಶ; ECI ವೆಬ್‌ಸೈ‌ಟ್‌ಗೆ ನಿಧಾನಗತಿಯಲ್ಲಿ ಅಪ್‌ಲೋಡ್: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 8 ಅಕ್ಟೋಬರ್ 2024, 6:56 IST
Last Updated 8 ಅಕ್ಟೋಬರ್ 2024, 6:56 IST
<div class="paragraphs"><p>ಜೈರಾಮ್ ರಮೇಶ್</p></div>

ಜೈರಾಮ್ ರಮೇಶ್

   

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣಾ ಫಲಿತಾಂಶದ ಟ್ರೆಂಡ್‌ಗಳನ್ನು ಚುನಾವಣಾ ಆಯೋಗವು ನಿಧಾನಗತಿಯಲ್ಲಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಹಳೆಯ ಮತ್ತು ತಪ್ಪು ಮಾಹಿತಿ ಹಂಚಿಕೊಳ್ಳುವ ಮೂಲಕ ಆಡಳಿತದ ಮೇಲೆ ಬಿಜೆಪಿ ಒತ್ತಡವನ್ನು ಸೃಷ್ಟಿ ಮಾಡಲು ಪ್ರಯತ್ನಿಸುತ್ತಿದೆಯೇ ಎಂದು ಕಾಂಗ್ರೆಸ್ ಆರೋಪಿಸಿದೆ.

ADVERTISEMENT

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ಲೋಕಸಭೆ ಚುನಾವಣೆಯಂತೆ, ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಹರಿಯಾಣದ ಫಲಿತಾಂಶ ಟ್ರೆಂಡ್ ನಿಧಾನಗತಿಯಲ್ಲಿ ಅಪ್‌ಲೋಡ್ ಮಾಡಲಾಗುತ್ತಿದೆ. ಹಳೆಯ ಮತ್ತು ತಪ್ಪು ಮಾಹಿತಿ ಹಂಚಿಕೊಳ್ಳುವ ಮೂಲಕ ಬಿಜೆಪಿ ಆಡಳಿತದ ಮೇಲೆ ಒತ್ತಡವನ್ನು ಹೆಚ್ಚಿಸಲು ಯತ್ನಿಸುತ್ತದೆಯೇ' ಎಂದು ಅವರು ಪ್ರಶ್ನಿಸಿದ್ದಾರೆ.

ಈ ಕುರಿತು ಚುನಾವಣಾ ಆಯೋಗಕ್ಕೆ ದೂರು ದಾಖಲಿಸಿರುವುದಾಗಿ ಜೈರಾಮ್ ರಮೇಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.