ಮುಂಬೈ: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯುತ್ತಿದ್ದ ವೇಳೆ ಖಾಸಗಿ ವಿಮಾನ ರನ್‌ವೇನಿಂದ ಜಾರಿ, ಅದರಲ್ಲಿದ್ದ ಎಂಟು ಮಂದಿ ಗಾಯಗೊಂಡಿದ್ದಾರೆ.
ಭಾರಿ ಮಳೆಯ ಪರಿಣಾಮವಾಗಿ ಕಡಿಮೆ ಗೋಚರತೆ ಇದ್ದುದರಿಂದ ವಿಮಾನವು ರನ್‌ವೇನಿಂದ ಜಾರಿದೆ ಮತ್ತು ಹಾನಿಗೀಡಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ವಿ.ಎಸ್.ಆರ್. ವೆಂಚರ್ಸ್ ಸಂಸ್ಥೆಗೆ ಸೇರಿದ ವಿಮಾನವು ವಿಶಾಖಪಟ್ಟಣಂನಿಂದ ಮುಂಬೈಗೆ ಆಗಮಿಸಿತ್ತು. ಈ ವಿಮಾನದಲ್ಲಿ ಆರು ಮಂದಿ ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿ ಇದ್ದರು ಎಂದು ವಿವರಿಸಿದ್ದಾರೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದು, ಇವರಲ್ಲಿ ಡೆನ್ಮಾರ್ಕ್ ಪ್ರಜೆಯೂ ಸೇರಿದ್ದಾರೆ.
ವಿಮಾನವು ರನ್‌ವೇಯಿಂದ ಜಾರಿದ ಬಳಿಕ ಅಲ್ಪ ಕಾಲಕ್ಕೆ ರನ್‌ವೇಗಳನ್ನು ಮುಚ್ಚಲಾಗಿತ್ತು. 39 ವಿಮಾನಗಳನ್ನು ಬೇರೆ ವಿಮಾನ ನಿಲ್ದಾಣಕ್ಕೆ ಕಳುಹಿಸಲಾಯಿತು ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ವಿವರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.