ಲಖನೌ: ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರ ಆಪ‍್ತ, ಅಮೇಠಿ ಲೋಕಸಭಾ ಕ್ಷೇತ್ರದಲ್ಲಿ ಅವರ ಗೆಲುವಿಗಾಗಿ ಶ್ರಮಿಸಿದ್ದ ಸುರೇಂದ್ರ ಸಿಂಗ್ ಮೇ. 25ರಂದು ಹತ್ಯೆಯಾಗಿದ್ದರು. ಸ್ಥಳೀಯ ಮಟ್ಟದಲ್ಲಿನ ರಾಜಕೀಯ ದ್ವೇಷವೇ ಸಿಂಗ್ ಹತ್ಯೆಗೆ ಕಾರಣ ಎಂದು ಉತ್ತರ ಪ್ರದೇಶ ಪೊಲೀಸ್ ಮುಖ್ಯಸ್ಥ ಒ.ಪಿ. ಸಿಂಗ್ ಹೇಳಿದ್ದಾರೆ.
ಈಗಾಗಲೇ ನಾವು ಮೂರು ಮಂದಿ ಆರೋಪಿಗಳನ್ನುಬಂಧಿಸಿದ್ದೇವೆ.ಇನ್ನಿಬ್ಬರು ತಲೆಮರೆಸಿಕೊಂಡಿದ್ದು ನಾವು ಶೀಘ್ರದಲ್ಲಿಯೇ ಅವರನ್ನು ಪತ್ತೆ ಹಚ್ಚುತ್ತೇವೆ.ಇಲ್ಲಿನ ಸಾಕ್ಷ್ಯ ದಾಖಲೆಗಳನ್ನು ಪರಿಶೀಲಿಸಿದಾಗ ಈ ಪ್ರಕರಣದಲ್ಲಿ 5 ಮಂದಿ ಆರೋಪಿಗಳು ಭಾಗಿಯಾಗಿದ್ದು, ಸಿಂಗ್ ಜತೆ ಇವರು ರಾಜಕೀಯ ದ್ವೇಷ ಹೊಂದಿದ್ದರು ಎಂದಿದ್ದಾರೆ ಒ.ಪಿ.ಸಿಂಗ್.
ಸುರೇಂದ್ರ ಸಿಂಗ್ ಅವರು ಬರೌಲಿಯಾ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷರಾಗಿದ್ದು, ಮೇ. 25 ಶನಿವಾರ ರಾತ್ರಿ 11.30ರ ಸುಮಾರಿಗೆ ಎರಡು ಬೈಕ್‌ಗಳಲ್ಲಿ ಬಂದಿದ್ದ ಅಪರಿಚಿತ ವ್ಯಕ್ತಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಅವರನ್ನು ಕೂಡಲೇ ಕೆ.ಜಿ. ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದರು.
ಇದನ್ನೂ ಓದಿ:ಅಮೇಠಿ: ಸಚಿವೆ ಸ್ಮೃತಿ ಇರಾನಿ ಆಪ್ತನ ಹತ್ಯೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.