ರುದ್ರಪ್ರಯಾಗ: ಉತ್ತರಾಖಂಡದ ಕೇದಾರನಾಥದಲ್ಲಿ ಭಾನುವಾರ ಹಿಮಪಾತವಾಗಿದ್ದು, ಹವಾಮಾನ ಮುನ್ಸೂಚನೆಗೆ ಅನುಗುಣವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ದೇವಸ್ಥಾನಕ್ಕೆ ಭೇಟಿ ನೀಡಲು ಬರುವ ಯಾತ್ರಾರ್ಥಿಗಳಿಗೆ ಪೊಲೀಸರು ಮನವಿ ಮಾಡಿದ್ದಾರೆ.
ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತಾದಿಗಳು ಕೊಡೆ, ರೈನ್‌ಕೋಟ್‌ಗಳು ಮತ್ತು ಅಗತ್ಯ ಔಷಧಗಳನ್ನು ಕೊಂಡೊಯ್ಯುವಂತೆ ಪೊಲೀಸರು ಸಲಹೆ ನೀಡಿದ್ದಾರೆ.
ದೇವಾಲಯದ ಮೇಲೆ ಹಿಮ ಬೀಳುತ್ತಿರುವ ವಿಡಿಯೊ ಕ್ಲಿಪ್ ಅನ್ನು ಪೊಲೀಸ್ ಸೂಪರಿಂಟೆಂಡೆಂಟ್ (ರುದ್ರಪ್ರಯಾಗ) ವಿಶಾಖ ಅಶೋಕ್ ಭದನೆ ಅವರು ಬಿಡುಗಡೆ ಮಾಡಿದ್ದಾರೆ.
ಕೇದಾರನಾಥ ಮತ್ತು ಬದರಿನಾಥದಲ್ಲಿ ಮೇ ತಿಂಗಳಲ್ಲಿ ಆಗಾಗ್ಗೆ ಹಿಮ ಬೀಳುತ್ತಿದ್ದು, ಇದು ಅಸಾಮಾನ್ಯ ಹವಾಮಾನ ವಿದ್ಯಮಾನವಾಗಿದೆ. ಹಿಮಪಾತವಿದ್ದರೂ ದೇಗುಲಗಳಿಗೆ ಭೇಟಿ ನೀಡುವ ಯಾತ್ರಾರ್ಥಿಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ.
ಚಾರ್ ಧಾಮ್ ಯಾತ್ರೆ ಆರಂಭವಾದ ಒಂದು ತಿಂಗಳೊಳಗೆ ಈ ಎರಡು ದೇವಾಲಯಗಳಿಗೆ ಸುಮಾರು ನಾಲ್ಕು ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳು ಭೇಟಿ ನೀಡಿದ್ದಾರೆ.
ಏಪ್ರಿಲ್ 25 ರಿಂದ ಕೇದಾರನಾಥ ಮತ್ತು ಏಪ್ರಿಲ್ 27 ರಿಂದ ಬದರಿನಾಥ ದೇವಾಲಯಗಳು ಭಕ್ತರ ದರ್ಶನಕ್ಕಾಗಿ ತೆರೆದಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.