ADVERTISEMENT

ಸಂವಿಧಾನ ಪೀಠಿಕೆ: 'ಸಮಾಜವಾದ', 'ಜಾತ್ಯತೀತ' ಸೇರ್ಪಡೆ ಪ್ರಶ್ನಿಸಿದ್ದ ಅರ್ಜಿ ವಜಾ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2024, 9:50 IST
Last Updated 25 ನವೆಂಬರ್ 2024, 9:50 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   ಪ್ರಜಾವಾಣಿ ಸಂಗ್ರಹ ಚಿತ್ರ

ನವದೆಹಲಿ: ಸಂವಿಧಾನದ ಪೀಠಿಕೆಯಲ್ಲಿ 'ಸಮಾಜವಾದ' ಮತ್ತು 'ಜಾತ್ಯತೀತ' ಎಂಬ ಪದಗಳನ್ನು ಸೇರಿಸಿದ 1976ರ ತಿದ್ದುಪಡಿಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.

1976ರಲ್ಲಿ ತುರ್ತು ಪರಿಸ್ಥಿತಿಯ ವೇಳೆ 42ನೇ ತಿದ್ದುಪಡಿ ಮೂಲಕ 'ಸಮಾಜವಾದ' ಮತ್ತು 'ಜಾತ್ಯತೀತ' ಎಂಬ ಪದಗಳನ್ನು ಸಂವಿಧಾನದ ಪೀಠಿಕೆಯಲ್ಲಿ ಸೇರಿಸಲಾಗಿತ್ತು.

ಇದನ್ನು ಪ್ರಶ್ನಿಸಿ ಬಿಜೆಪಿ ಹಿರಿಯ ನಾಯಕ ಡಾ.ಸುಬ್ರಮಣಿಯನ್ ಸ್ವಾಮಿ, ಬಲರಾಮ್ ಸಿಂಗ್ ಹಾಗೂ ವಕೀಲ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಅರ್ಜಿ ಸಲ್ಲಿಸಿದ್ದರು.

ADVERTISEMENT

ಅರ್ಜಿಗಳ ಕುರಿತಾದ ತೀರ್ಪನ್ನು ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಹಾಗೂ ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ನ್ಯಾಯಪೀಠ ನವೆಂಬರ್ 22ರಂದು ಕಾಯ್ದಿರಿಸಿತ್ತು.

ಈ ಅರ್ಜಿಗಳ ಬಗ್ಗೆ ವಿವರವಾದ ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ಸಿಜೆಐ ಸಂಜೀವ್ ಖನ್ನಾ ನೇತೃತ್ವದ ಪೀಠ ಹೇಳಿದೆ.

ಸಂವಿಧಾನವನ್ನು ತಿದ್ದುಪಡಿ ಮಾಡುವ ಅಧಿಕಾರ ಸಂಸತ್ತಿಗೆ ಇದೆ. ತಿದ್ದುಪಡಿಯಾಗಿ ಹಲವು ವರ್ಷಗಳು ಕಳೆದಿದ್ದು, ಈಗ ಅದನ್ನು ರದ್ದುಪಡಿಸಲಾಗದು ಎಂಬುದನ್ನು ಈಗಾಗಲೇ ವಿವರಿಸಲಾಗಿದೆ ಎಂದು ಹೇಳಿ ಅರ್ಜಿಯನ್ನು ಪೀಠ ವಜಾಗೊಳಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.