ADVERTISEMENT

ಜಮ್ಮು: ಉಗ್ರರ ದಾಳಿಗೆ ಯೋಧ ಹುತಾತ್ಮ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 13:58 IST
Last Updated 2 ಸೆಪ್ಟೆಂಬರ್ 2024, 13:58 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಶ್ರೀನಗರ: ಜಮ್ಮುವಿನ ಸುಂಜವಾನ್‌ ಸೇನಾ ನೆಲೆ ಮೇಲೆ ಉಗ್ರರು ಸೋಮವಾರ ದಾಳಿ ಮಾಡಿದ್ದು, ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಉಗ್ರರು ದೂರದಿಂದಲೇ ನಿಂತು ಗುಂಡು ಹಾರಿಸಿದ್ದಾರೆ. ಸೋಮವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಈ ಘಟ‌ನೆ ನಡೆದಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರ ಲೆ. ಕರ್ನಲ್‌ ಸುನೀಲ್‌ ಬಡ್‌ಥ್ವಾಲ್‌ ತಿಳಿಸಿದ್ದಾರೆ.

ಗುಂ‌ಡೇಟಿನಿಂದ ತೀವ್ರ ಗಾಯಗೊಂಡಿದ್ದ ಯೋಧನನ್ನು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಆಸ್ಪತ್ರೆಗೆ ದಾಖಲು ಮಾಡುವ ವೇಳೆಗೆ ಅವರು ಬದುಕುಳಿಯಲಿಲ್ಲ ಎಂದು ಹೇಳಿದ್ದಾರೆ.

ADVERTISEMENT

ಈ ನೆಲೆಯು ಜಮ್ಮು ಮತ್ತು ಕಾಶ್ಮೀರದ ಪ್ರಮುಖ ಸೇನೆ ಕೇಂದ್ರವಾಗಿದೆ. ಉಗ್ರರ ಪತ್ತೆಗೆ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಶೀಘ್ರ ಚುನಾವಣೆ ನಡೆಯಲಿದ್ದು, ಈ ಕೃತ್ಯವು ಆತಂಕ ಮೂಡಿಸಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ ಈಚಿನ ವರ್ಷಗಳಲ್ಲಿ 40–50 ಉಗ್ರರು ನುಸುಳಿದ್ದಾರೆ. ಅಮೆರಿಕನ್‌ ಎಂ–4 ರೈಫಲ್‌ ಸೇರಿ ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಹೊಂದಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.