ADVERTISEMENT

ಜಮ್ಮು & ಕಾಶ್ಮೀರ | ಗುಂಡಿನ ಚಕಮಕಿ: ನಾಲ್ವರು ಉಗ್ರರು ಹತ

​ಪ್ರಜಾವಾಣಿ ವಾರ್ತೆ
Published 6 ಜುಲೈ 2024, 9:49 IST
Last Updated 6 ಜುಲೈ 2024, 9:49 IST
<div class="paragraphs"><p> ಭದ್ರತಾ ಸಿಬ್ಬಂದಿ–ಉಗ್ರರ ನಡುವೆ ಗುಂಡಿನ ಚಕಮಕಿ</p></div>

ಭದ್ರತಾ ಸಿಬ್ಬಂದಿ–ಉಗ್ರರ ನಡುವೆ ಗುಂಡಿನ ಚಕಮಕಿ

   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಎರಡು ಕಡೆಗಳಲ್ಲಿ ಶನಿವಾರ ಭದ್ರತಾ ಪಡೆ ಹಾಗೂ ಭಯೋತ್ಪಾದಕರ ನಡುವೆ ನಡೆದ ಪ್ರತ್ಯೇಕ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರು ಹತರಾಗಿದ್ದು, ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.

ಕುಲ್ಗಾಂನ ಚಿನ್ನಿಗ್ರಾಮ ಗ್ರಾಮದಲ್ಲಿ ಭಯೋತ್ಪಾದಕರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಶೋಧ ಕಾರ್ಯ ನಡೆಸಲಾಗಿತ್ತು. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಉಗ್ರರನ್ನು ಹೊಡೆದು ಉರುಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ADVERTISEMENT

‘ಎನ್‌ಕೌಂಟರ್‌ ನಡೆದ ಜಾಗ ಡ್ರೋನ್‌ ದೃಶ್ಯಾವಳಿಗಳಲ್ಲಿ ನಾಲ್ವರು ಭಯೋತ್ಪಾದಕರ ಮೃತದೇಹದ ದೃಶ್ಯ ಸೆರೆಯಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ’ ಎಂದರು.

ದಕ್ಷಿಣ ಕಾಶ್ಮೀರದ ಮೋದೆರಾಗಾಮ್‌ ಗ್ರಾಮದಲ್ಲಿ ಶೋಧ ಕಾರ್ಯ ಆರಂಭಿಸಿದ್ದರು. ಈ ವೇಳೆ ಭಾರತೀಯ ಸೈನಿಕರಯನ್ನು ಗುರಿಯಾಗಿರಿಸಿ, ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದರು. ಈ ವೇಳೆ ಸೇನೆಯ ಇಬ್ಬರು ಯೋಧರು ಹುತಾತ್ಮರಾದರು ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.