ತಿರುವನಂತಪುರಂ: ಯೋಧನ ವೇಷ ಧರಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಪ್ರಶ್ನಿಸಿದ್ದ ವ್ಯಕ್ತಿಯನ್ನು ಪತ್ತೆ ಹಚ್ಚಲಾಗಿದೆ ಎಂದು ಮಾತೃಭೂಮಿ ಪತ್ರಿಕೆ ವರದಿ ಮಾಡಿದೆ.
ಪತ್ತನಂತಿಟ್ಟ ನಿವಾಸಿ ಉಣ್ಣಿ. ಎಸ್.ನಾಯರ್ ಎಂಬವರು ಈ ವಿಡಿಯೊವನ್ನು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದರು ಎಂದು ಸೈಬರ್ ಪೊಲೀಸ್ ಹೇಳಿದ್ದಾರೆ.
ವಿಡಿಯೊದಲ್ಲಿರುವ ವ್ಯಕ್ತಿ ಮಾಜಿ ಯೋಧಆಗಿದ್ದು ಇದೀಗ ಡಿಫೆನ್ಸ್ ಸೆಕ್ಯೂರಿಟಿ ಕಾರ್ಪ್ಸ್ ನಲ್ಲಿದ್ದಾರೆಎಂದಿದ್ದಾರೆ ಪೊಲೀಸರು. ಈತನ ಬಗ್ಗೆ ಮಾಹಿತಿ ಸಂಗ್ರಹಿಸಿದ್ದು, ಬೇರೆ ವ್ಯಕ್ತಿಯ ಸೋಗಿನಲ್ಲಿ ಕಾಣಿಸಿಕೊಂಡು ಸಾರ್ವಜನಿಕರಿಗೆ ತೊಂದರೆಯುಂಟು ಮಾಡಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ.
ಏನಿದು ಪ್ರಕರಣ?
ಸೇನಾ ಸಮವಸ್ತ್ರ ಧರಿಸಿದ ವ್ಯಕ್ತಿಯೊಬ್ಬರು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರವಾಹ ಪೀಡಿತ ಪ್ರದೇಶಗಳಲ್ಲೊಂದಾದ ಚೆಂಗನ್ನೂರ್ ನಲ್ಲಿ ರಕ್ಷಣಾ ಕಾರ್ಯ ನಡೆಸಲು ಬಿಡುವುದಿಲ್ಲ ಎಂದು ಹೇಳುತ್ತಿರುವ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿತ್ತು.
2 ನಿಮಿಷ 30 ಸೆಕೆಂಡ್ಸ್ ಅವಧಿಯ ಈ ವಿಡಿಯೊ ಶನಿವಾರ ಭಾರತೀಯ ಮಹಿಳಾ ಮೋರ್ಚಾ ತಲಶ್ಶೇರಿ ಮಂಡಲ ತಮ್ಮ ಫೇಸ್ ಬುಕ್ ಪುಟದಲ್ಲಿ ಶೇರ್ ಮಾಡಿತ್ತು. ಆದರೆ ಈ ವಿಡಿಯೊ ನಕಲಿ ಎಂದು ಭಾರತೀಯ ಸೇನೆಯ ಹೆಚ್ಚುವರಿ ಪ್ರಧಾನ ನಿರ್ದೇಶಕ- ಸಾರ್ವಜನಿಕ ಮಾಹಿತಿ ಟ್ವೀಟ್ ಮಾಡಿದೆ.
ಇದನ್ನೂ ಓದಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.