ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಶನಿವಾರ ಭಯೋತ್ಪಾದಕರ ವಿರುದ್ಧ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಭದ್ರತಾ ಪಡೆಯ ಇಬ್ಬರು ಯೋಧರು ಹುತಾತ್ಮರಾಗಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಇಬ್ಬರು ನಾಗರಿಕರೂ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಹಲಾನ್ ಗಗರ್‌ಮಂಡು ಅರಣ್ಯದಲ್ಲಿ ಭಯೋತ್ಪಾದಕರು ಇರುವ ಬಗ್ಗೆ ಗುಪ್ತಚರ ಇಲಾಖೆಯ ಖಚಿತ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಪ್ಯಾರಾ ಕಮಾಂಡೋ, ಸ್ಥಳೀಯ ಪೊಲೀಸ್ ಹಾಗೂ ಸೇನಾ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಕೈಗೊಂಡಿತ್ತು.
'ಗುಂಡಿನ ಕಾಳಗದಲ್ಲಿ ಆರು ಮಂದಿ ಯೋಧರು ಹಾಗೂ ಇಬ್ಬರು ನಾಗರಿಕರು ಗಾಯಗೊಂಡರು. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಆದರೆ ಇಬ್ಬರು ಯೋಧರು ಹುತಾತ್ಮರಾದರು' ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಉಗ್ರರನ್ನು ಮಟ್ಟ ಹಾಕಲು ಕಾರ್ಯಾಚರಣೆ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.