ADVERTISEMENT

ತಮಿಳುನಾಡು | ಪಟಾಕಿ ಸ್ಫೋಟ: ಮೃತಪಟ್ಟ ಇಬ್ಬರ ಕುಟಂಬಕ್ಕೆ ತಲಾ ₹ 3 ಲಕ್ಷ ಘೋಷಣೆ

ಪಿಟಿಐ
Published 9 ಜುಲೈ 2024, 12:44 IST
Last Updated 9 ಜುಲೈ 2024, 12:44 IST
<div class="paragraphs"><p>ಸಾಂದರ್ಭಿಕ ಚಿತ್ರ </p></div>

ಸಾಂದರ್ಭಿಕ ಚಿತ್ರ

   

ಚೆನ್ನೈ: ತಮಿಳುನಾಡಿನ ವಿರುದುನಗರ ಜಿಲ್ಲೆಯ ಗ್ರಾಮವೊಂದರ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಶಿವಕಾಶಿಯ ಕಲೈಯರ್ ಕುರಿಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೃತರನ್ನು ವೆಲ್ಲೂರಿನ ಚಿದಂಬರಪುರಂನವರು ಎಂದು ಗುರುತಿಸಲಾಗಿದೆ.

ADVERTISEMENT

ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡವರನ್ನು ವಿರುದುನಗರ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರಿಗೆ ಅಗತ್ಯ ಚಿಕಿತ್ಸೆ ಒದಗಿಸುವಂತೆ ತಮಿಳುನಾಡು ಸಿಎಂ ಎಂ.ಕೆ ಸ್ಟಾಲಿನ್ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ₹3 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹1 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.