ನವದೆಹಲಿ: ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಮತ್ತು ಅವರ ಬೆಂಬಲಿಗರು ಸೋಮವಾರ ಉಪವಾಸ ಸತ್ಯಾಗ್ರಹ ಮುಕ್ತಾಯಗೊಳಿಸಿದರು.
ಲಡಾಖ್ ಬಗೆಗಿನ ಬೇಡಿಕೆಗಳ ಬಗ್ಗೆ ಡಿಸೆಂಬರ್‌ನಲ್ಲಿ ಮಾತುಕತೆ ನಡೆಸುವುದಾಗಿ ಕೇಂದ್ರ ಗೃಹ ಸಚಿವಾಲಯವು ಭರವಸೆ ನೀಡಿದ ಬಳಿಕ ವಾಂಗ್ಚುಕ್ ಮತ್ತು ಇತರರು ಸತ್ಯಾಗ್ರಹವನ್ನು ಕೈಬಿಟ್ಟರು.
ದೆಹಲಿಯಲ್ಲಿರುವ ಲಡಾಖ್ ಭವನದಲ್ಲಿ ಅ. 6ರಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ವಾಂಗ್ಚುಕ್ ಮತ್ತು ಅವರ ಬೆಂಬಲಿಗರನ್ನು ಜಮ್ಮು–ಕಾಶ್ಮೀರ ಮತ್ತು ಲಡಾಖ್‌ನ ಜಂಟಿ ಕಾರ್ಯದರ್ಶಿ ಪ್ರಶಾಂತ್ ಲೋಖಂಡೆ ಸೋಮವಾರ ಭೇಟಿ ಮಾಡಿ, ಗೃಹ ಸಚಿವಾಲಯದ ಪತ್ರವನ್ನು ನೀಡಿದರು.
ಲಡಾಖ್‌ನ ಪ್ರತಿನಿಧಿಗಳೊಂದಿಗೆ ಗೃಹ ಸಚಿವಾಲಯದ ಉನ್ನತ ಮಟ್ಟದ ಸಮಿತಿಯು ಮಾತುಕತೆ ನಡೆಸಿದ್ದು, ಡಿ.3ರಂದು ಮುಂದಿನ ಸಭೆ ನಡೆಯಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.