ದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಚುನಾವಣೆ ನಡೆಯಲಿದ್ದು, ಯಾರ ಹೆಸರನ್ನೂ ಸೂಚಿಸುವುದಿಲ್ಲ. ಚುನಾವಣೆ ಮುಕ್ತವಾಗಿ ನಡೆಯಲಿ ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.
ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಮತ್ತು ಕಾಂಗ್ರೆಸ್ ನಾಯಕ ಶಶಿ ತರೂರ್, ಪಕ್ಷದ ಅಧ್ಯಕ್ಷೀಯ ಹುದ್ದೆಯ ಆಕಾಂಕ್ಷಿಗಳಾಗಿದ್ದಾರೆ.
ಈಗಾಗಲೇ ಅಶೋಕ್ ಗೆಹಲೋತ್, ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಜತೆಗೆ, ಪಕ್ಷ ಕೊಡುವ ಯಾವುದೇ ಹುದ್ದೆ ಅಥವಾ ಜವಾಬ್ದಾರಿಯನ್ನು ನಿರ್ವಹಿಸಲು ಸಿದ್ಧ ಎಂದು ಹೇಳಿದ್ದಾರೆ.
ಮತ್ತೊಂದೆಡೆ ಶಶಿ ತರೂರ್ ಕೂಡ ಪಕ್ಷದ ಅಧ್ಯಕ್ಷೀಯ ಹುದ್ದೆಯ ಚುನಾವಣೆಗೆ ಬಿರುಸಿನ ತಯಾರಿ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ, ಸೋನಿಯಾ ಗಾಂಧಿಯವರು ಹೇಳಿಕೆ ನೀಡಿದ್ದು, ಯಾವುದೇ ನಿರ್ದಿಷ್ಠ ಹೆಸರನ್ನು ಪಕ್ಷದ ಅಧ್ಯಕ್ಷ ಹುದ್ದೆಗೆ ಸೂಚಿಸುವುದಿಲ್ಲ. ಚುನಾವಣೆ ಪ್ರಕ್ರಿಯೆ ಮೂಲಕವೇ ಮುಕ್ತವಾಗಿ ಅಧ್ಯಕ್ಷರ ಆಯ್ಕೆಯಾಗಲಿ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.