ADVERTISEMENT

ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಮರು ಆಯ್ಕೆ

ಪಿಟಿಐ
Published 8 ಜೂನ್ 2024, 13:40 IST
Last Updated 8 ಜೂನ್ 2024, 13:40 IST
<div class="paragraphs"><p>ಸೋನಿಯಾ ಗಾಂಧಿ</p></div>

ಸೋನಿಯಾ ಗಾಂಧಿ

   

(ಪಿಟಿಐ ಚಿತ್ರ)

ನವದೆಹಲಿ: ಕಾಂಗ್ರೆಸ್‌ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರನ್ನು ಶನಿವಾರ ಸರ್ವಾನುಮತದಿಂದ ಮರು ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ. 

ADVERTISEMENT

ಲೋಕಸಭಾ ಚುನಾವಣೆ ಫಲಿತಾಂಶ ಹಾಗೂ ಸಂಸದೀಯ ಪಕ್ಷದ ನಾಯಕರ ಆಯ್ಕೆ ವಿಚಾರವಾಗಿ ಚರ್ಚಿಸಲು ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ (ಸಿಡಬ್ಲುಸಿ) ಹಾಗೂ ಸಂಸದೀಯ ಪಕ್ಷದ (ಸಿಪಿಪಿ) ಸಭೆಗಳು ಶನಿವಾರ ನಡೆದವು. 

ಸಭೆಯಲ್ಲಿ, ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಅವರ ಹೆಸರನ್ನು ಪ್ರಸ್ತಾಪಿಸಿದರು. ಗೌರವ್ ಗೊಗೊಯ್, ಸುಧಾಕರನ್ ಮತ್ತು ತಾರಿಕ್ ಅನ್ವರ್ ಈ ಪ್ರಸ್ತಾಪವನ್ನು ಅನುಮೋದಿಸಿದರು.

77 ವರ್ಷದ ಸೋನಿಯಾ ಗಾಂಧಿ ಕಳೆದ ಫೆಬ್ರವರಿಯಲ್ಲಿ ರಾಜಸ್ಥಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

ಇದಕ್ಕೂ ಮುನ್ನ, ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಸ್ಥಾನ ವಹಿಸಿಕೊಳ್ಳುವಂತೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸರ್ವಾನುಮತದಿಂದ ಒತ್ತಾಯಿಸಿತು. ಈ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳುವುದಾಗಿ ರಾಹುಲ್‌ ಗಾಂಧಿ ಹೇಳಿದ್ದಾರೆ ಪಕ್ಷದ ಉನ್ನತ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.