ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ವಿರೋಧ ಪಕ್ಷಗಳ ಹಲವು ನಾಯಕರು ರಾಷ್ಟ್ರಪತಿ ಅವರನ್ನು ಮಂಗಳವಾರ ಭೇಟಿ ಮಾಡುವಮೂಲಕ ಕೇಂದ್ರ ಸರ್ಕಾರ ಜಾರಿ ಮಾಡಲು ಹೊರಟಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ತಡೆಯುವಂತೆ ಒತ್ತಾಯಿಸಿದ್ದಾರೆ.
ಇದೇ ವೇಳೆ ಜಾಮಿಯಾ ಮಿಲಿಯಾ ವಿವಿ ಮೇಲಿನ ದಾಳಿ ವಿರೋಧಿಸಿ ರಾಷ್ಟ್ರಪತಿಗಳ ಮುಂದೆ ತಮ್ಮ ಪ್ರತಿಭಟನೆ ದಾಖಲಿಸಿದ್ದಾರೆ.
ರಾಷ್ಟ್ರಪತಿಭೇಟಿ ನಂತರ ಮಾತನಾಡಿದ ಸೋನಿಯಾ ಗಾಂಧಿ, ‘ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳ ಜೊತೆಪೊಲೀಸರು ನಡೆದುಕೊಂಡಿರುವ ರೀತಿಯ ಬಗ್ಗೆ ತೀವ್ರ ನೋವುಂಟಾಗಿದೆ. ವಿದ್ಯಾರ್ಥಿಗಳನ್ನು ಪೊಲೀಸರು ಹೊಡೆಯುವ ಕ್ರಮಕ್ಕೆಪ್ರಜಾಪ್ರಭುತ್ವದಲ್ಲಿ ಒಪ್ಪಿಗೆ ಇಲ್ಲ. ವಿದ್ಯಾರ್ಥಿನಿಯರ ವಸತಿ ಗೃಹಗಳಿಗೆ ಪೊಲೀಸರುನುಗ್ಗಿದ್ದು ಖಂಡನಾರ್ಹ’ಎಂದು ಹೇಳಿದ್ದಾರೆ.
ಜನರ ಬಾಯಿ ಮುಚ್ಚಿಸುವ ನಿಟ್ಟಿನಲ್ಲಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಯಾವುದೇ ರೀತಿಯ ನಿರ್ಧಾರ ತೆಗೆದುಕೊಳ್ಳಬಲ್ಲದು. ಅದಕ್ಕೆ ಸಹಾನುಭೂತಿಯೇಇಲ್ಲ ಎಂದು ಹೇಳುವ ಮೂಲಕ ಸೋನಿಯಾ ಗಾಂಧಿ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಕಾಂಗ್ರೆಸ್ ನಾಯಕರಾದ ಕಪಿಲ್ ಸಿಬಲ್, ಎ.ಕೆ ಆಂಟನಿ, ಗುಲಾಮ್ ನಭಿ ಆಜಾದ್, ಆನಂದ್ ಶರ್ಮಾ, ಆರ್‌ಜೆಡಿಯ ಮನೋಜ್ ಕುಮಾರ್ ಜಾ, ಸಿಪಿಐನ ಡಿ. ರಾಜಾ, ಸಿಪಿಎಂನ ಸೀತಾರಾಂ ಯಚೂರಿ ಸೇರಿದಂತೆ ಹಲವು ನಾಯಕರು ರಾಷ್ಟ್ರಪತಿ ಭೇಟಿ ವೇಳೆ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.