ADVERTISEMENT

ರಾಜ್ಯಸಭೆ ಚುನಾವಣೆ: ರಾಜಸ್ಥಾನದಿಂದ ಸೋನಿಯಾ ಗಾಂಧಿ ಕಣಕ್ಕೆ, ನಾಮಪತ್ರ ಸಲ್ಲಿಕೆ

ಪಿಟಿಐ
Published 14 ಫೆಬ್ರುವರಿ 2024, 4:21 IST
Last Updated 14 ಫೆಬ್ರುವರಿ 2024, 4:21 IST
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ   

ನವದೆಹಲಿ/ಜೈಪುರ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ರಾಜ್ಯಸಭೆ ಚುನಾವಣೆಗೆ ರಾಜಸ್ಥಾನದಿಂದ ಸ್ಫರ್ಧಿಸಲಿದ್ದು, ಇಂದು (ಬುಧವಾರ) ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಬೆಳಿಗ್ಗೆ ಜೈಪುರಕ್ಕೆ ಬಂದಿಳಿದ ಅವರನ್ನು ರಾಜಸ್ಥಾನದ ಮಾಜಿ ಸಿಎಂ, ಕಾಂಗ್ರೆಸ್ ನಾಯಕ ಅಶೋಕ್ ಗೆಹಲೋತ್ ಬರಮಾಡಿಕೊಂಡರು. ಬಳಿಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು.

ನಾಮಪತ್ರ ಸಲ್ಲಿಸುವ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಕೆ.ಸಿ.ವೇಣುಗೋಪಾಲ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ADVERTISEMENT

ರಾಜಸ್ಥಾನ, ಹಿಮಾಚಲ ಪ್ರದೇಶ, ಮಧ್ಯಪ್ರದೇಶದ ಕಾಂಗ್ರೆಸ್‌ ಘಟಕಗಳು, ಮುಖಂಡರು ತಮ್ಮ ರಾಜ್ಯದಿಂದಲೇ ಸ್ಪರ್ಧಿಸಲು ಅವರಿಗೆ ಮನವಿ ಮಾಡಿದ್ದವು. ಈ ಪೈಕಿ ರಾಜಸ್ಥಾನ ಸುರಕ್ಷಿತ ಎಂಬ ತೀರ್ಮಾನಕ್ಕೆ ನಾಯಕರು ಬಂದಿದ್ದರಿಂದ ಕೊನೆಗೆ ಸೋನಿಯಾ ಅವರು ರಾಜಸ್ಥಾನ ಆಯ್ಕೆ ಮಾಡಿದ್ದಾರೆ ಎನ್ನಲಾಗಿದೆ.

ಫೆಬ್ರುವರಿ 27ರಂದು ಚುನಾವಣೆ ನಡೆಯಲಿದ್ದು ಫೆ.15 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ.

ಸೋನಿಯಾ ಅವರು ಮೊದಲ ಅವಧಿಗೆ ಅಮೇಠಿಯಿಂದ ಲೋಕಸಭೆಗೆ ಆಯ್ಕೆಯಾಗಿದ್ದರು. ಸದ್ಯ, ರಾಯ್‌ ಬರೇಲಿ ಕ್ಷೇತ್ರ ಪ್ರತಿನಿಧಿಸುತ್ತಿದ್ದು, ಇಲ್ಲಿಂದ ಪ್ರಿಯಾಂಕಾ ಗಾಂಧಿ ಅವರು ಲೋಕಸಭೆಗೆ ಸ್ಪರ್ಧಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

2019ರ ಸಾರ್ವತ್ರಿಕ ಚುನಾವಣೆಯೇ ನನ್ನ ಕೊನೆಯ ಚುನಾವಣೆ ಎಂದು ಸೋನಿಯಾ ಗಾಂಧಿ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.