ಚೆನ್ನೈ: ಚೆನ್ನೈ ನಗರ ಸೇರಿದಂತೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ತಗ್ಗು ಪ್ರದೇಶಗಳು ಮಳೆ ನೀರಿನಿಂದ ಜಲಾವೃತವಾಗಿವೆ.
ಹಳಿಗಳ ಮೇಲೆ ನೀರು ನಿಂತಿರುವುದರಿಂದ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕದ ಕರಾವಳಿ, ಉತ್ತರ ಒಳಭಾಗ ಮತ್ತು ದಕ್ಷಿಣ ಒಳನಾಡಿನಲ್ಲಿ ಇಂದು (ಬುಧವಾರ) ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 18ರವರೆಗೆ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ರದ್ದುಪಡಿಸಲಾದ ರೈಲುಗಳ ಮಾಹಿತಿ ಇಲ್ಲಿದೆ...
ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ -ಕೆಎಸ್ಆರ್ ಬೆಂಗಳೂರು (12657)
ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ -ಕೆಎಸ್ಆರ್ ಬೆಂಗಳೂರು (12607)
ಕೆಎಸ್ಆರ್ ಬೆಂಗಳೂರು -ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ (12608)
ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ -ಮೈಸೂರು (12609)
ಮೈಸೂರು - ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ (12610)
ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ –ಬೆಂಗಳೂರು (12027)
ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ –ಕೆಎಸ್ಆರ್ ಬೆಂಗಳೂರು (12028)
ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ - ಮೈಸೂರು (12007)
ಮೈಸೂರು - ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ (12008)
ಚಾಮರಾಜನಗರ - ಮೈಸೂರು (06275)
ಮೈಸೂರು -ಕೆಎಸ್‌ಆರ್ ಬೆಂಗಳೂರು ಮಾಲ್ಗುಡಿ ಎಕ್ಸ್‌ಪ್ರೆಸ್ (20623)
ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ –ಬೆಂಗಳೂರು ಎಕ್ಸ್‌ಪ್ರೆಸ್ (2062)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.