ADVERTISEMENT

ನೀತಿ ಸಂಹಿತೆ ಉಲ್ಲಂಘನೆ: ಎಸ್‌ಪಿ ಸಂಸದ ಸೇರಿ 161 ಜನರ ವಿರುದ್ಧ ಪ್ರಕರಣ ದಾಖಲು

ಪಿಟಿಐ
Published 9 ಜೂನ್ 2024, 11:54 IST
Last Updated 9 ಜೂನ್ 2024, 11:54 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ಬಲ್ಲಿಯಾ (ಉತ್ತರ ಪ್ರದೇಶ): ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆಯ ದಿನದಂದು (ಜೂನ್ 4) ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ಸಮಾಜವಾದಿ ಪಕ್ಷದ ಸಂಸದ ಸನಾತನ ಪಾಂಡೆ ಸೇರಿದಂತೆ 161 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಪಾಂಡೆ ಮತ್ತು ಇತರರ ವಿರುದ್ಧ ಪೊಲೀಸ್‌ ಅಧಿಕಾರಿ ಸಂಜಯ್ ಸಿಂಗ್ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ADVERTISEMENT

ಎಫ್‌ಐಆರ್ ಪ್ರಕಾರ, ಮತ ಎಣಿಕೆ ನಡೆಯುತ್ತಿದ್ದ ವೇಳೆ ಬಲ್ಲಿಯಾದಲ್ಲಿ ರಸ್ತೆ ತಡೆದು ವಾಹನ ಸಂಚಾರಕ್ಕೆ ಅಡ್ಡಿಪಡಿಸುವ ಮೂಲಕ ಸಂಚಾರ ದಟ್ಟನೆ ಉಂಟಾಗಿದ್ದು, ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಉಲ್ಲೇಖಿಸಲಾಗಿದೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ನೀತಿ ಸಂಹಿತೆಯ (ಐಪಿಸಿ) ವಿವಿಧ ಸೆಕ್ಷನ್‌ಗಳ ಅಡಿಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.