ADVERTISEMENT

ಗುಜರಾತ್‌ನ ವಡೋದರಕ್ಕೆ ಆಗಮಿಸಿದ ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್

ಪಿಟಿಐ
Published 28 ಅಕ್ಟೋಬರ್ 2024, 2:50 IST
Last Updated 28 ಅಕ್ಟೋಬರ್ 2024, 2:50 IST
   

ವಡೋದರ(ಗುಜರಾತ್): ಸ್ಪೇನ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ಅವರು ಗುಜರಾತ್‌ನ ವಡೋದರಕ್ಕೆ ಇಂದು(ಸೋಮವಾರ) ಮುಂಜಾನೆ ಆಗಮಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಭಾರತಕ್ಕೆ ಸ್ಯಾಂಚೆಜ್ ಅವರ ಮೊದಲ ಅಧಿಕೃತ ಭೇಟಿ ಇದಾಗಿದ್ದು, ಅವರ ವಿಮಾನವು ತಡರಾತ್ರಿ 1.30ರ ವೇಳೆಗೆ ವಡೋದರ ವಿಮಾನ ನಿಲ್ದಾಣಕ್ಕೆ ತಲುಪಿದೆ. ಸ್ಪೇನ್‌ಗೆ ಹಿಂತಿರುಗುವ ಮೊದಲು ಅವರು ಮಂಗಳವಾರ ಮುಂಬೈಗೆ ಭೇಟಿ ನೀಡಲಿದ್ದಾರೆ.

ಇಂದು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ಫ್ಯಾಸಿಲಿಟಿ, ಟಿಎಎಸ್‌ನ ಸಿ–295 ವಿಮಾನ ತಯಾರಿಕಾ ಸಂಕೀರ್ಣವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಸ್ಯಾಂಚೆಜ್ ಅವರು ಜಂಟಿಯಾಗಿ ಉದ್ಘಾಟಿಸಲಿದ್ದಾರೆ. ಇದಕ್ಕೂ ಮೊದಲು ಅವರು ಮೋದಿಯವರೊಂದಿಗೆ ರೋಡ್‌ ಶೋನಲ್ಲಿ ಭಾಗವಹಿಸಲಿದ್ದಾರೆ.

ADVERTISEMENT

ಬಳಿಕ ಲಕ್ಷ್ಮಿ ವಿಲಾಸ ಅರಮನೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಆಯೋಜಿಸಿರುವ ದ್ವಿಪಕ್ಷೀಯ ಸಭೆಯಲ್ಲಿ ಉಭಯ ನಾಯಕರು ಚರ್ಚೆ ನಡೆಸಲಿದ್ದಾರೆ ಎಂದು ಎಂಇಎ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.