ರಾಂಚಿ (ಜಾರ್ಖಂಡ್): ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನದಲ್ಲಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಮಧ್ಯಂತರ ಜಾಮೀನು ನೀಡಲು ರಾಂಚಿಯ ವಿಶೇಷ ಪಿಎಂಎಲ್‌ಎ ನ್ಯಾಯಾಲಯ ಶನಿವಾರ ನಿರಾಕರಿಸಿದೆ.
ತನ್ನ ಚಿಕ್ಕಪ್ಪನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸೊರೇನ್ 13 ದಿನಗಳ ಮಧ್ಯಂತರ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯವು ಅವರಿಗೆ ಜಾಮೀನು ನೀಡಲು ನಿರಾಕರಿಸಿದೆ.
ಹಿನ್ನೆಲೆ:
ಸುಮಾರು ₹600 ಕೋಟಿ ಮೊತ್ತದ ಭೂ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಆರೋಪದಡಿ ಹೇಮಂತ್ ಸೊರೇನ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಜನವರಿ ಬಂಧಿಸಿತ್ತು.
ಅಧಿಕೃತ ಭೂ ದಾಖಲೆಗಳನ್ನು ತಿರುಚಿ ಭೂಮಿಯ ಮಾರಾಟಗಾರರು, ಖರೀದಿದಾರರ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಲಾಗಿದೆ. ಈ ಮೂಲಕ ಕೊಟ್ಯಂತರ ರೂಪಾಯಿ ಮೌಲ್ಯದ ಭೂಮಿಯನ್ನು ಸ್ವಾಧೀನ ಪಡೆಯಲಾಗಿದೆ ಎಂಬುದು ತನಿಖಾ ಸಂಸ್ಥೆ ಇ.ಡಿ ಆರೋಪವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.