ADVERTISEMENT

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ: ವಿಚಾರಣೆಗೆ ಒಪ್ಪಿಗೆ

ವಿಶೇಷ ಸ್ಥಾನಮಾನ ಪ್ರಶ್ನಿಸಿ ಅರ್ಜಿ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2019, 19:36 IST
Last Updated 18 ಫೆಬ್ರುವರಿ 2019, 19:36 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ 370 ನೇ ಕಲಂನ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ತ್ವರಿತ ವಿಚಾ ರಣೆಗೆ ಸುಪ್ರೀಂ ಕೋರ್ಟ್‌ ಸೋಮವಾರ ಒಪ್ಪಿದೆ.

ವಕೀಲ ಹಾಗೂ ಬಿಜೆಪಿ ಮುಖಂಡ ಅಶ್ವಿನ್‌ ಉಪಾಧ್ಯಾಯ ಅವರು ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಿದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ಹಾಗೂ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರನ್ನು ಒಳಗೊಂಡ ಪೀಠ, ‘ತೀವ್ರ ರಾಷ್ಟ್ರೀಯ ಪ್ರಾಮುಖ್ಯತೆ’ ಇರುವ ಕಾರಣ ವಿಚಾರಣೆಗೆ ಒಪ್ಪಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT