ADVERTISEMENT

ವ್ಯಾನ್ ಡಿಕ್ಕಿ ಹೊಡೆದು ಪಾದಯಾತ್ರೆ ಮಾಡುತ್ತಿದ್ದ ನಾಲ್ವರು ಭಕ್ತರು ಸಾವು

​ಪ್ರಜಾವಾಣಿ ವಾರ್ತೆ
Published 17 ಜುಲೈ 2024, 14:54 IST
Last Updated 17 ಜುಲೈ 2024, 14:54 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ತಂಜಾವೂರು: ತಂಜಾವೂರು-ತಿರುಚಿರಾಪಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ ಪಾದಯಾತ್ರೆ ಮಾಡುತ್ತಿದ್ದ ಭಕ್ತರಿಗೆ ವ್ಯಾನ್‌ವೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಭಕ್ತರು ಮೃತಪಟ್ಟಿದ್ದಾರೆ.

ನಾಲ್ವರು ಮಹಿಳೆಯರು ಸೇರಿದಂತೆ ಐವರು ಭಕ್ತರು ಪುದುಕೋಟ್ಟೈ ಜಿಲ್ಲೆಯವರಾಗಿದ್ದು, ಸಮಯಪುರದ ಮಾರಿಯಮ್ಮನ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ವಳಂಬಕುಡಿ ಗ್ರಾಮದಲ್ಲಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಗಾಯಗೊಂಡ ಮಹಿಳೆಯೊಬ್ಬರನ್ನು ತಂಜಾವೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಸಂತ್ರಸ್ತರ ಕುಟುಂಬಗಳಿಗೆ ತಲಾ ₹2 ಲಕ್ಷ ಮತ್ತು ಚಿಕಿತ್ಸೆ ಪಡೆಯುತ್ತಿರುವ ಮಹಿಳೆಗೆ ₹1 ಲಕ್ಷ ಪರಿಹಾರ ಘೋಷಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.