ನವದೆಹಲಿ: ವಿಮಾನ ಹಾರಾಟ ನಿಯಂತ್ರಕರ (ಎಟಿಸಿ) ಅನುಮತಿ ಇಲ್ಲದೆ ಸ್ಪೈಸ್‌ಜೆಟ್ ಪ್ರಯಾಣಿಕರ ವಿಮಾನ ಡಿಸೆಂಬರ್ 30ರಂದು ಗುಜರಾತ್‌ನ ರಾಜ್‌ಕೋಟ್‌ನಿಂದ ಹಾರಾಟ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ) ತನಿಖೆಗೆ ಆದೇಶಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ವಿಮಾನವು ರಾಜ್‌ಕೋಟ್‌ನಿಂದ ಬೆಳಿಗ್ಗೆ 9.30ಕ್ಕೆ ಹೊರಟು 11.15ಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಇಳಿದಿದೆ. ಇದರ ಪೈಲಟ್‌ಗಳನ್ನುಡಿಜಿಸಿಎ ವಿಚಾರಣೆಗೆ ಒಳಪಡಿಸಲಿದ್ದು, ವಿಚಾರಣೆ ಇನ್ನೂ ಬಾಕಿ ಉಳಿದಿದೆ ಎಂದು ಸ್ಪೈಸ್‌ಜೆಟ್ ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.