ನವದೆಹಲಿ: ದೇಶದಾದ್ಯಂತ ಕೋವಿಡ್ ಪ್ರಕರಣಗಳು ಏರಿಕೆಯಾಗುತ್ತಿದ್ದು, ಅದರಲ್ಲೂ ಆರು ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣ ದಾಖಲಾಗುತ್ತಿದ್ದು, ಇದನ್ನು ನಿಯಂತ್ರಿಸಬೇಕು ಎಂದು ಕೇಂದ್ರ ಸರ್ಕಾರವು ಕರ್ನಾಟಕ ಸೇರಿದಂತೆ ಆರು ರಾಜ್ಯಗಳಿಗೆ ಪತ್ರ ಬರೆದಿದೆ.
ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು, ಕೇರಳ ಹಾಗೂ ಕರ್ನಾಟಕ್ಕೆ ಕೇಂದ್ರ ಸರ್ಕಾರ ಪತ್ರ ಬರೆದಿದ್ದು, ವೈರಲ್ ಸೋಂಕಿನ ಹಠಾತ್ ಹೆಚ್ಚಳದ ಬಗ್ಗೆ ಗಮನ ವಹಿಸಬೇಕು ಎಂದು ಹೇಳಿದೆ. ಅಲ್ಲದೇ, ಪರೀಕ್ಷೆ, ಚಿಕಿತ್ಸೆ, ಟ್ರ್ಯಾಕಿಂಗ್ ಹಾಗೂ ಲಸಿಕಾರಣವನ್ನು ತೀವ್ರಗತಿಯಲ್ಲಿ ಮಾಡಬೇಕು ಎಂದು ಸಲಹೆ ನೀಡಿದೆ.
‘ಕೆಲವು ರಾಜ್ಯಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಳವಾಗುತ್ತಿದ್ದು, ಸ್ಥಳೀಯವಾಗಿ ಸೋಂಕು ಹರಡಿರುವ ಸಾಧ್ಯತೆ ಇದೆ. ಹೀಗಾಗಿ ಅಪಾಯದ ಮೌಲ್ಯ ಮಾಪನ ಆಧಾರಿತ ವಿಧಾನವನ್ನು ಅನುಸರಿಸಿ, ಈವೆರಗೂ ಸೋಂಕಿನ ವಿರುದ್ಧದ ಹೋರಾಟದಿಂದ ಆದ ಲಾಭವನ್ನು ಕಳೆದುಕೊಳ್ಳದೇ, ಸೋಂಕನ್ನು ನಿಯಂತ್ರಿಸಬೇಕಾಗಿದೆ‘ ಎಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ಉಲ್ಲೇಖ ಮಾಡಿದೆ.
ಸುಮಾರು ನಾಲ್ಕು ತಿಂಗಳ ಬಳಿಕ ಒಂದೇ ದಿನ 700 ಕೋವಿಡ್ ಕೇಸ್‌ಗಳು ಪತ್ತೆಯಾಗಿದ್ದು, ಒಟ್ಟು ಸಕ್ರೀಯ ಪ್ರಕರಣಗಳ ಸಂಖ್ಯೆ 4,623ಕ್ಕೆ ಏರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.