ಬಾರಾಬಂಕಿ, ಉತ್ತರಪ್ರದೇಶ : ಅಕ್ರಮ ಮದ್ಯ ಸೇವಿಸಿ14 ಮಂದಿ ಮೃತಪಟ್ಟು, ಕನಿಷ್ಠ 40 ಜನರು ಅಸ್ವಸ್ಥರಾಗಿರುವ ಘಟನೆ ಬಾರಬಂಕಿ ಜಿಲ್ಲೆ ರಾಮನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.
ರಾಮನಗರದ ಸಮುದಾಯ ಆರೋಗ್ಯ ಕೇಂದ್ರಕ್ಕೆಅಸ್ವಸ್ಥಗೊಂಡವರನ್ನು ಮಂಗಳವಾರ ಬೆಳಗ್ಗೆ ದಾಖಲಿಸಲಾಯಿತು. ಮೃತಪಟ್ಟವರಲ್ಲಿ ನಾಲ್ವರು ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದಾರೆ. 16 ಮಂದಿ ತೀವ್ರ ಅಸ್ವಸ್ಥಗೊಂಡಿದ್ದು, ಲಖನೌನಕಿಂಗ್ ಜಾರ್ಜ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಘಟನೆಗೆ ಸಂತಾಪ ಸೂಚಿಸಿದ್ದು, ಮೃತಪಟ್ಟ ಕುಟುಂಬದವರಿಗೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.ಅಬಕಾರಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು,ಘಟನೆ ಸಂಬಂಧ 48 ಗಂಟೆಗಳಲ್ಲಿ ತನಿಖಾ ವರದಿ ಸಲ್ಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಆದೇಶಿಸಿದ್ದಾರೆ ಎಂದುಆರೋಗ್ಯ ಸಚಿವ ಸಿದ್ದಾರ್ಥನಾಥ ಸಿಂಗ್ ತಿಳಿಸಿದ್ದಾರೆ.
ರಾಜಕೀಯ ಆಯಾಮ: ದುರಂತದ ಹಿಂದೆ ಸಮಾಜವಾದಿ ಪಕ್ಷದ ನಾಯಕರ ಕೈವಾಡವಿದೆ. ಮದ್ಯ ದಂಧೆಯಲ್ಲಿ ತೊಡಗಿರುವವರಿಗೆ ಬೆಂಬಲ ನೀಡುತ್ತಿದ್ದಾರೆ ಅಬಕಾರಿ ಸಚಿವ ಜೈ ಪ್ರತಾಪ್ ಸಿಂಗ್ ಆರೋಪಿಸಿದ್ದಾರೆ.
ವರ್ಷಾರಂಭದಿಂದ ಉತ್ತರಪ್ರದೇಶದಲ್ಲಿ ಅಕ್ರಮ ಮದ್ಯ ಸೇವಿಸಿ 100ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.