ADVERTISEMENT

ಅಕ್ರಮ ಮೀನುಗಾರಿಕೆ ಆರೋಪ: 20 ಮಂದಿ ಭಾರತೀಯ ಮೀನುಗಾರರ ಬಂಧನ

ಮೀನುಗಾರಿಕೆ ಮಾಡುತ್ತಿದ್ದ ಎರಡು ದೋಣಿಗಳ ವಶ, ಲಂಕಾ ಮೀನುಗಾರಿಕೆ ಪ್ರಾಧಿಕಾರಕ್ಕೆ ಹಸ್ತಾಂತರಿಸುವ ಸಾಧ್ಯತೆ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2021, 6:30 IST
Last Updated 25 ಮಾರ್ಚ್ 2021, 6:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಮೇಶ್ವರಂ(ತಮಿಳುನಾಡು): ಅಕ್ರಮವಾಗಿ ತಮ್ಮ ದೇಶದ ಜಲ ಪ್ರದೇಶದಲ್ಲಿ ಮೀನುಗಾರಿಕೆಯಲ್ಲಿ ತೊಡಗಿದ್ದ ಆರೋಪದ ಮೇಲೆ 20 ಮಂದಿ ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದ್ದು, ಅವರಿಂದ ಎರಡು ದೋಣಿಗಳನ್ನು ವಶಕ್ಕೆ ಪಡೆದಿದೆ.

ರಾಮೇಶ್ವರಂ ಮತ್ತು ತಂಗಚಿಮಡಂ ಮೂಲದ ಮೀನುಗಾರರನ್ನು ಬುಧವಾರ ರಾತ್ರಿ ಕಚ್ಚತೀವು ಬಳಿ ಶ್ರೀಲಂಕಾ ನೌಕಾಪಡೆಯವರು ವಶಕ್ಕೆ ಪಡೆದಿದ್ದಾರೆ ಎಂದು ಮೀನುಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಶಕ್ಕೆ ಪಡೆದಿರುವ ಮೀನುಗಾರರನ್ನು ಹೆಚ್ಚಿನ ವಿಚಾರಣೆಗಾಗಿ ಸ್ಥಳೀಯ ನೌಕಾಪಡೆಯ ಶಿಬಿರಕ್ಕೆ ಕರೆದೊಯ್ದಿದ್ದು, ಅವರನ್ನು ಶ್ರೀಲಂಕಾದ ಮೀನುಗಾರಿಕೆ ಅಧಿಕಾರಿಗಳಿಗೆ ಹಸ್ತಾಂತರಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಭಾರತೀಯ ಮೀನುಗಾರರನ್ನು ಬಂಧಿಸಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಮೀನುಗಾರ ಸಂಘದ ಪ್ರತಿನಿಧಿಗಳು, ‘ಬಂಧಿತ ಮೀನುಗಾರರನ್ನು ಬಿಡುಗಡೆ ಮಾಡಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.