ಚೆನ್ನೈ: ತಮಿಳುನಾಡಿನ ದಕ್ಷಿಣ ಭಾಗಗಳಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಪ್ರವಾಹ ಪರಿಸ್ಥಿತಿ ಕುರಿತು ಚರ್ಚಿಸಲು ಡಿಸೆಂಬರ್ 19ರಂದು(ನಾಳೆ) ಸಮಯಾವಕಾಶ ಕೋರಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಭೇಟಿಯ ವೇಳೆ ರಾಜ್ಯದ ದಕ್ಷಿಣ ಜಿಲ್ಲೆಗಳಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾದ ಹಾನಿ, ಪರಿಹಾರ ಹಾಗೂ ರಕ್ಷಣಾ ಕಾರ್ಯಗಳ ಕುರಿತು ಚರ್ಚಿಸುವ ಸಾಧ್ಯತೆಯಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಚೆನ್ನೈ ಮತ್ತು ಇತರ ಜಿಲ್ಲೆಗಳಲ್ಲಿ ಮಳೆಯಿಂದಾದ ಹಾನಿಯನ್ನು ನಿಭಾಯಿಸಲು ಕೇಂದ್ರ ಸರ್ಕಾರ ತ್ವರಿತವಾಗಿ ಹಣ ಬಿಡುಗಡೆ ಮಾಡುವಂತೆ ಪ್ರಸ್ತಾಪಿಸುವ ಸಾಧ್ಯತೆಯಿದೆ.
ಪ್ರವಾಹದಿಂದಾಗಿ ದಕ್ಷಿಣದ ನಾಲ್ಕು ಜಿಲ್ಲೆಗಳಾದ ಕನ್ಯಾಕುಮಾರಿ, ತೂತುಕುಡಿ, ತೆಂಕಾಶಿ ಮತ್ತು ತಿರುನಲ್ವೇಲಿ ಹೆಚ್ಚು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.