ADVERTISEMENT

ಉತ್ತರ ಪ್ರದೇಶ: ಜಾಮಾ ಮಸೀದಿ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಕಲ್ಲು ತೂರಾಟ

ಪಿಟಿಐ
Published 24 ನವೆಂಬರ್ 2024, 4:40 IST
Last Updated 24 ನವೆಂಬರ್ 2024, 4:40 IST
<div class="paragraphs"><p>ಭದ್ರತೆಗೆ ನಿಂತ ಪೊಲೀಸರು</p></div>

ಭದ್ರತೆಗೆ ನಿಂತ ಪೊಲೀಸರು

   

ಪಿಟಿಐ ಚಿತ್ರ

ಸಂಭಾಲ್‌: ಉತ್ತರ ಪ್ರದೇಶದ ಸಂಭಾಲ್‌ನ ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳ ಮೇಲೆ ಸ್ಥಳೀಯರು ಕಲ್ಲು ತೂರಾಟ ನಡೆಸಿದ ಘಟನೆ ಭಾನುವಾರ ನಡೆದಿದೆ.

ADVERTISEMENT

ಬೆಳಿಗ್ಗೆ 7.30ರ ಹೊತ್ತಿಗೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಐದು ಠಾಣೆಗಳ ಪೊಲೀಸರು ಭದ್ರತೆಗಾಗಿ ಸ್ಥಳದಲ್ಲಿದ್ದರು. ಆರಂಭದಲ್ಲಿ ಎಲ್ಲವೂ ಸಹಜ ಸ್ಥಿತಿಯಲ್ಲಿಯೇ ಇತ್ತು. ಬಳಿಕ ಏಕಾಏಕಿ ಬಂದ ಜನರ ಗುಂಪು ಪೊಲೀಸರೊಂದಿಗೆ ವಾಗ್ವಾದ ನಡೆಸಿ ಕಲ್ಲು ತೂರಿದೆ. ಪೊಲೀಸರು ಜನರನ್ನು ಎದುರಿಸಲಾಗದೆ ಪೊಲೀಸರು ಹಿಂದೆ ಸರಿದಿದ್ದಾರೆ ಎಂದು ವರದಿಯಾಗಿದೆ. ಜನರ ಗುಂಪು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸುತ್ತಿರುವ ವಿಡಿಯೊವನ್ನು ಎಎನ್ಐ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದೆ.

ಕಲ್ಲು ತೂರುತ್ತಿದ್ದವರನ್ನು ತಡೆಯಲು ಪೊಲೀಸರು ಅಶ್ರುವಾಯು ಸಿಡಿಸಿದ್ದಾರೆ.

ಜಾಮಾ ಮಸೀದಿಯಿದ್ದ ಜಾಗದಲ್ಲಿ ಪುರಾತನ ಹಿಂದೂ ದೇವಾಲಯವಿತ್ತು, ಬಾಬರ್‌ನ ಕಾಲದಲ್ಲಿ ದೇಗುಲ ಕೆಡವಿ ಮಸೀದಿ ಕಟ್ಟಲಾಗಿದೆ. ಹಿಂದೂ ದೇಗುಲಕ್ಕೆ ಸೇರಿದ ಅನೇಕ ಗುರುತುಗಳೂ ಅಲ್ಲಿವೆ ಎಂದು ಆರೋಪಿಸಿ ವಕೀಲ ವಿಷ್ಣು ಶಂಕರ್‌ ಜೈನ್‌ ಎನ್ನುವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಗಣಿಸಿದ ಕೋರ್ಟ್‌ ವಿಡಿಯೊ ಮತ್ತು ಛಾಯಾಗ್ರಹಣ ಬಳಸಿ ಸಮೀಕ್ಷೆ ನಡೆಸುವಂತೆ ಆದೇಶ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.