ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕೋವಿಡ್ ಕರ್ತವ್ಯಕ್ಕೆ ತೆರಳುತ್ತಿದ್ದ ಸಿಆರ್‌ಪಿಎಫ್ ವಾಹನದ ಮೇಲೆ ದುಷ್ಕರ್ಮಿಗಳಿಂದ ಕಲ್ಲಿನ ತೂರಾಟ ನಡೆದಿದೆ.
ಮಧ್ಯ ಕಾಶ್ಮೀರದ ಬುಡ್ಗಾಮ್ ಜಿಲ್ಲೆಯ ಚಾಡೂರಾದ ಕ್ರಾಲ್ಪೋರಾ ಪ್ರದೇಶದಲ್ಲಿ ಶುಕ್ರವಾರ ಘಟನೆ ನಡೆದಿದ್ದು, ದುಷ್ಕರ್ಮಿಗಳನ್ನು ಚದುರಿಸಲು ಸಿಆರ್‌ಪಿಎಫ್ ಗಾಳಿಯಲ್ಲಿ ಮೂರು ಸುತ್ತಿನ ಗುಂಡನ್ನು ಹಾರಿಸಿದೆ ಎಂದು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಪೊಲೀಸರ ಮಾಹಿತಿಯ ಪ್ರಕಾರ, ಯೋಧರು ಕೋವಿಡ್-19 ಕರ್ತವ್ಯ ನಿರ್ವಹಣೆಗಾಗಿ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಕಲ್ಲು ತೂರಾಟ ನಡೆಸಲಾಗಿದೆ.
ಘಟನೆಯಲ್ಲಿ ಯೋಧರಿಗೆ ಯಾವುದೇ ಗಾಯವುಂಟಾಗಿಲ್ಲ. ವಾಹನಕ್ಕೂ ಹಾನಿ ಸಂಭವಿಸಿಲ್ಲ ಎಂದು ತಿಳಿಸಿದೆ.
ಶುಕ್ರವಾರ ಮುಂಜಾನೆ ಕೋವಿಡ್ ನಿಯೋಜನಾ ಕರ್ತವ್ಯಕ್ಕೆ ಹೋಗುತ್ತಿದ್ದ ಸಿಆರ್‌ಪಿಎಫ್ ವಾಹನದ ಮೇಲೆ ಚಾಡೂರಾದಲ್ಲಿ ಕೆಲವು ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದರು. ಅವರನ್ನು ಚದುರಿಸಲು ಸೈನ್ಯವು ಎರಡರಿಂದ ಮೂರು ಸುತ್ತಿನ ಗುಂಡನ್ನು ಗಾಳಿಯಲ್ಲಿ ಹಾರಿಸಿದೆ. ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ ಎಂದು ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.