ADVERTISEMENT

ತನಿಖಾ ಸಂಸ್ಥೆಗಳ ದುರ್ಬಳಕೆ ಖಂಡಿಸಿ ಸಂಸತ್ ಆವರಣದಲ್ಲಿ ‘ಇಂಡಿಯಾ’ ಪ್ರತಿಭಟನೆ

ಪಿಟಿಐ
Published 1 ಜುಲೈ 2024, 12:30 IST
Last Updated 1 ಜುಲೈ 2024, 12:30 IST
<div class="paragraphs"><p>ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ಹಲವು ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.</p></div>

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ‘ಇಂಡಿಯಾ’ ಮೈತ್ರಿಕೂಟದ ಹಲವು ಸಂಸದರು ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

   

ಪಿಟಿಐ ಚಿತ್ರ

ನವದೆಹಲಿ: ‘ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿ ಕೇಂದ್ರ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ’ ಎಂದು ಆರೋಪಿಸಿ ‘ಇಂಡಿಯಾ’ ಮೈತ್ರಿಕೂಟದ ಸಂಸದರು ಸಂಸತ್ತಿನ ಆವರಣದಲ್ಲಿರುವ ಮಕರ ದ್ವಾರದ ಮೆಟ್ಟಿಲುಗಳ ಮೇಲೆ ಸೋಮವಾರ ಪ್ರತಿಭಟನೆ ನಡೆಸಿದರು.

ADVERTISEMENT

‘ವಿರೋಧ ಪಕ್ಷದ ನಾಯಕರನ್ನು ಸುಮ್ಮನಿರಿಸಲು ತನಿಖಾ ಸಂಸ್ಥೆಗಳ ದುರುಪಯೋಗ ಮಾಡಿಕೊಳ್ಳುವುದನ್ನು ನಿಲ್ಲಿಸಿ’, ‘ಬಿಜೆಪಿಯನ್ನು ಸೇರಿಕೊಳ್ಳಿ, ಭ್ರಷ್ಟಾಚಾರ ಎಸಗಲು ಪರವಾನಗಿ ಪಡೆಯಿರಿ’ ಎಂಬ ಬರಹಗಳಿರುವ ಫಲಕಗಳನ್ನು ನಾಯಕರು ಹಿಡಿದುಕೊಂಡಿದ್ದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರು ಸರಳುಗಳ ಹಿಂದಿರುವ ಪೋಸ್ಟರ್‌ ಅನ್ನು ಎಎಪಿ ಸಂಸದ ರಾಘವ್‌ ಚಡ್ಡಾ ಹಿಡಿದುಕೊಂಡಿದ್ದರು.

ಬಂಧನದಲ್ಲಿರುವ ಪಶ್ಚಿಮ ಬಂಗಾಳದ ಮೂವರು ಸಚಿವರನ್ನು ಬಿಡುಗಡೆಗೊಳಿಸಿ, ‘ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹಾಗೂ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ ಸೊರೇನ್‌ ಅವರ ವಿರುದ್ಧ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಿ’ ಎಂದು ನಾಯಕರು ಘೋಷಣೆಗಳನ್ನು ಕೂಗಿದರು. ಕೇಜ್ರಿವಾಲ್‌ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಕೆಲವು ದಿನಗಳ ಹಿಂದೆ ಜುಲೈ 12ರವರೆಗೆ ವಿಸ್ತರಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.