ADVERTISEMENT

ಭೋಪಾಲ್‌: ಬ್ಯೂಟಿ ಪಾರ್ಲರ್‌ಗೆ ಹೋಗಬೇಡ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಪತ್ನಿ

ಪಿಟಿಐ
Published 29 ಏಪ್ರಿಲ್ 2023, 5:41 IST
Last Updated 29 ಏಪ್ರಿಲ್ 2023, 5:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   


ಭೋ‍ಪಾಲ್‌: ಬ್ಯೂಟಿ ಪಾರ್ಲರ್‌ಗೆ ಹೋಗಲು ಪತಿ ಅನುಮತಿ ನಿರಾಕರಿಸಿದ್ದಕ್ಕಾಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ವಿಕ್ಷಿಪ್ತ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. 

ಇಂದೋರ್‌ನ ಸ್ಕೀಂ ನಂಬರ್‌ 51 ಪ್ರದೇಶದಲ್ಲಿ ಘಟನೆ ನಡೆದಿದ್ದು, ಮಹಿಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಬ್ಯೂಟಿ ಪಾರ್ಲರ್‌ಗೆ ಹೋಗುವುದು ನಿಲ್ಲಿಸು ಎಂದು ಪತಿ ಹೇಳಿದ್ದಕ್ಕಾಗಿ ಆಕೆ, ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಲಾಗಿದ್ದು, ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ‘ ಎಂದು ಸ್ಥಳೀಯ ಪೊಲೀಸ್‌ ಅಧಿಕಾರಿ ಉಮಾಶಂಕರ್ ಯಾದವ್‌ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.