ಹೈದರಾಬಾದ್: ತನ್ನ ಯೂಟ್ಯೂಬ್ ಚಾನೆಲ್‌ಗೆ ಚಂದಾದಾರರ ಸಂಖ್ಯೆ ಕಡಿಮೆಯಾಗಿದೆ ಮತ್ತು ವಿಡಿಯೊ ನೋಡುಗರ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಮನನೊಂದು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹೈದರಾಬಾದ್‌ನಲ್ಲಿ ವರದಿಯಾಗಿದೆ.
23 ವರ್ಷದ ವಿದ್ಯಾರ್ಥಿ ಗ್ವಾಲಿಯರ್‌ನ ಐಐಐಟಿಎಂನಲ್ಲಿ ವ್ಯಾಸಂಗ ಮಾಡುತ್ತಿದ್ದ. ಹೈದರಾಬಾದ್‌ನ ವಸತಿ ಕಟ್ಟಡವೊಂದರ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ತನ್ನ ಯೂಟ್ಯೂಬ್ ಚಾನೆಲ್ ನೋಡುಗರ ಸಂಖ್ಯೆಯಲ್ಲಿ ಇಳಿಕೆಯಾಗಿರುವುದು ಮತ್ತು ಚಂದಾದಾರರ ಸಂಖ್ಯೆ ಕಡಿಮೆ ಇರುವುದರಿಂದ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಿದ್ಯಾರ್ಥಿ ಡೆತ್‌ನೋಟ್ ಬರೆದಿದ್ದಾನೆ.
ಅಲ್ಲದೆ, ಭವಿಷ್ಯ ಮತ್ತು ಉದ್ಯೋಗದ ವಿಚಾರದಲ್ಲಿ ಪಾಲಕರು ಸರಿಯಾಗಿ ನಿರ್ದೇಶನ ಮಾಡುತ್ತಿಲ್ಲ ಎಂದು ವಿದ್ಯಾರ್ಥಿ ಡೆತ್‌ನೋಟ್‌ನಲ್ಲಿ ಆರೋಪಿಸಿದ್ದಾನೆ.
ಅಪಾರ್ಟ್‌ಮೆಂಟ್ ಒಂದರಲ್ಲಿ ಇದ್ದುಕೊಂಡು ಆನ್‌ಲೈನ್ ಮೂಲಕ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ, ವಿಡಿಯೊ ಗೇಮ್ ಕುರಿತು ಯೂಟ್ಯೂಬ್‌ಗೆ ವಿಡಿಯೊ ಅಪ್‌ಲೋಡ್ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.