ADVERTISEMENT

ರ್‍ಯಾಗಿಂಗ್‌ನಿಂದ ಎಂಬಬಿಎಸ್ ವಿದ್ಯಾರ್ಥಿ ಸಾವು

ಪಿಟಿಐ
Published 17 ನವೆಂಬರ್ 2024, 23:20 IST
Last Updated 17 ನವೆಂಬರ್ 2024, 23:20 IST
<div class="paragraphs"><p>ಸಾವು</p></div>

ಸಾವು

   

(ಪ್ರಾತಿನಿಧಿಕ ಚಿತ್ರ)

ಪಾಟನ್ : ಗುಜರಾತ್‌ನ ಪಾಟನ್ ಜಿಲ್ಲೆಯ ವೈದ್ಯಕೀಯ ಕಾಲೇಜಿನಲ್ಲಿ 18 ವರ್ಷದ ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ  ಹಿರಿಯ ವಿದ್ಯಾರ್ಥಿಗಳು ಮಾಡಿದ ರ್‍ಯಾಗಿಂಗ್‌ನಿಂದ ಮೃತಪಟ್ಟಿದ್ದಾರೆ ಎಂದು  ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ.

ADVERTISEMENT

ಮೃತರನ್ನು ಪಾಟನ್‌ನ ಜಿಎಂಇಆರ್‌ಎಸ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ  ಅನಿಲ್ ಮೆಥನಿಯಾ ಎಂದು ಗುರುತಿಸಲಾಗಿದೆ.

‘ಶನಿವಾರ ರಾತ್ರಿ ಹಾಸ್ಟೆಲ್‌ನಲ್ಲಿ ಹಿರಿಯ ವಿದ್ಯಾರ್ಥಿಗಳು ತನ್ನ ಪರಿಚಯ ಮಾಡಿಕೊಳ್ಳುವಂತೆ ಹೇಳಿ ಮೂರು ಗಂಟೆ ನಿಲ್ಲಿಸಿದ ಪರಿಣಾಮ ಅನಿಲ್‌ ಪ್ರಜ್ಞೆ ತಪ್ಪಿ ಬಿದ್ದು ಮೃತಪಟ್ಟಿದ್ದಾರೆ. ರ್‍ಯಾಗಿಂಗ್‌ ವಿರೋಧಿ ಸಮಿತಿಯು ಕಾಲೇಜಿನಲ್ಲಿ ತನಿಖೆ ನಡೆಸುತ್ತಿದ್ದು, ಘಟನೆಗೆ ಹಿರಿಯ ವಿದ್ಯಾರ್ಥಿಗಳು ಕಾರಣರಾಗಿದ್ದಾರೆ ಅವರ ವಿರುದ್ಧ ಕಠಣ ಕ್ರಮ ಕೈಗೊಳ್ಳಲಾಗುವುದು’ ಎಂದು ಕಾಲೇಜಿನ ಡೀನ್ ಡಾ.ಹಾರ್ದಿಕ್ ಶಾ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.