ತಿರುವನಂತಪುರ: ಕೇರಳ ಸರ್ಕಾರವು 1ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ತಿಂಗಳಲ್ಲಿ 4 ದಿನ ‘ಬ್ಯಾಗ್ ಮುಕ್ತ ದಿನವಾಗಿ‘ (ಬ್ಯಾಗ್‌ಲೆಸ್ ಸ್ಕೂಲ್ ದಿನ) ಮಾಡುವ ಮೂಲಕ ವಿದ್ಯಾರ್ಥಿಗಳಿಗಾಗಿ ಹೊಸ ಯೋಜನೆಯನ್ನು ಶೀಘ್ರದಲ್ಲಿಯೇ ಪರಿಚಯಿಸಲಿದೆ ಎಂದು ಶಿಕ್ಷಣ ಸಚಿವ ವಿ.ಶಿವನ್‌ಕುಟ್ಟಿ ಹೇಳಿದ್ದಾರೆ.
ಪೋಷಕರ ಮತ್ತು ವಿದ್ಯಾರ್ಥಿಗಳ ದೂರುಗಳನ್ನು ಆಧರಿಸಿ ಈಗಾಗಲೇ ಶಾಲಾ ಬ್ಯಾಗ್‌ಗಳ ತೂಕ ಇಳಿಸುವ ನಿಟ್ಟಿನಲ್ಲಿ ಪಠ್ಯ ಪುಸ್ತಕಗಳನ್ನು ಎರಡು ವಿಭಾಗಗಳಾಗಿ ವಿಂಗಡಿಸಲಾಗಿದೆ. ಆದರೂ ಶಾಲಾ ಬ್ಯಾಗ್‌ಗಳ ತೂಕದ ಬಗ್ಗೆ ದೂರುಗಳು ಬರುತ್ತಿರುವುದರಿಂದ ತಿಂಗಳಲ್ಲಿ 4 ದಿನ ಬ್ಯಾಗ್ ಮುಕ್ತ ಶಾಲಾ ದಿನವಾಗಿ ಮಾಡಲು ತ್ವರಿತ ಕ್ರಮ ಕೈಗೊಳ್ಳಲು ಸರ್ಕಾರ ಚಿಂತನೆ ನಡೆಸಿದೆ ಎಂದು ಶಿವನ್‌ಕುಟ್ಟಿ ಹೇಳಿದ್ದಾರೆ.
1ನೇ ತರಗತಿಯ ಮಕ್ಕಳ ಬ್ಯಾಗ್ ತೂಕವು 1.6 ರಿಂದ 2.2 ಕೆ.ಜಿ ಹಾಗೂ 10ನೇ ತರಗತಿ ವಿದ್ಯಾರ್ಥಿಗಳ ಬ್ಯಾಗ್ 2.5 ರಿಂದ 4.5 ಕೆ.ಜಿ ತೂಕ ಹೊಂದಿರುವಂತೆ ಶಿಕ್ಷಣ ಇಲಾಖೆ ರಾಜ್ಯದ ಎಲ್ಲ ಶಾಲಾ–ಕಾಲೇಜುಗಳಿಗೆ ಆದೇಶ ಹೊರಡಿಸಲಾಗವುದು ಎಂದು ಸಚಿವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.